ತಾಲಿಬಾನ್ ವಶದಲ್ಲಿ ಅಫ್ಘಾನಿಸ್ತಾನ: ಎಲ್ಲಾ ಭಾರತೀಯರ ಸ್ಥಳಾಂತರಿಸುವಂತೆ ಕೇಂದ್ರಕ್ಕೆ ಪಂಜಾಬ್ ಸಿಎಂ ಆಗ್ರಹ

ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸೋಮವಾರ ಆಗ್ರಹಿಸಿದ್ದಾರೆ. 
ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್
ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್

ಚಂಡೀಗಢ: ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸೋಮವಾರ ಆಗ್ರಹಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಿದೆ. ಅಫ್ಘಾನಿಸ್ತಾನದಲ್ಲಿ 200 ಮಂದಿ ಸಿಕ್ಖರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಎಲ್ಲಾ ಭಾರತೀಯರನ್ನು ಸ್ಥಳಾಂತರ ಮಾಡಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್‌ ಘನಿ ದೇಶದಿಂದ ಪಲಾಯನ ಮಾಡಿದ ಬಳಿಕ 20 ವರ್ಷಗಳ ಯುದ್ಧದಲ್ಲಿ ತಾಲಿಬಾನ್‌ ಗೆದ್ದಂತಾಗಿದೆ. 

ಭಾನುವಾರ ರಾತ್ರಿ ತಾಲಿಬಾನ್‌ ಉಗ್ರರು ಅಧ್ಯಕ್ಷೀಯ ಭವನವನ್ನು ವಶಪಡಿಸಿಕೊಂಡ ಬಳಿಕ ಕಾಬೂಲ್‌ನಲ್ಲಿ ಆತಂಕ ಮನೆ ಮಾಡಿದ್ದು, ಅನೇಕರು ವಿವಿಧ ದೇಶಗಳಿಗೆ ಹೋಗಲು ಮುಂದಾಗಿದ್ದಾರೆ. ಕೇವಲ 10 ದಿನಗಳಲ್ಲಿ ತಾಲಿಬಾನಿ ಉಗ್ರರು ಅಪ್ಘಾನಿಸ್ತಾನವನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು, ದೇಶದಿಂದ ಪಲಾಯನ ಮಾಡಿದ ಬಳಿಕ ಫೇಸ್‌ಬುಕ್‌ನಲ್ಲಿ ಹೇಳಿಕೆ ನೀಡಿರುವ ಅಶ್ರಫ್‌ ಘನಿ, ತಾಲಿಬಾನಿಗಳು ತಮ್ಮ ಖಡ್ಗ ಮತ್ತು ಬಂದೂಕುಗಳ ತೀರ್ಪಿನಿಂದ ಗೆದ್ದಿದ್ದಾರೆ. ಈಗ ತಮ್ಮ ದೇಶವಾಸಿಗಳ ಗೌರವ, ಆಸ್ತಿ ಮತ್ತು ಸ್ವ-ಸಂರಕ್ಷಣೆಯ ಹೊಣೆ ಹೊತ್ತಿದ್ದಾರೆ ಎಂದು ಹೇಳಿದ್ದರು. ತಾಲಿಬಾನ್ ಸಹ-ಸಂಸ್ಥಾಪಕ ಅಬ್ದುಲ್ ಘನಿ ಬರದಾರ್ ಕೂಡ ವಿಜಯವನ್ನು ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com