ಸೋನಿಯಾ, ರಾಹುಲ್ ಗಾಂಧಿ ಜೊತೆ ಸಮಸ್ಯೆಯಿಲ್ಲ: ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುಶ್ಮಿತಾ ದೇವ್ ಹೇಳಿಕೆ
ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಸುಶ್ಮಿತಾ ದೇವ್ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ತೊರೆಯಲು ಕಾರಣ ತಿಳಿಸಲು ನಿರಾಕರಿಸಿರುವ ಅವರು ರಾಹುಲ್ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದ್ದಾರೆ.
ಪಕ್ಷದ ಅಧ್ಯಕ್ಷರಿಗೆ ನನ್ನ ರಾಜಿನಾಮೆ ಕಾರಣವನ್ನು ಪತ್ರದಲ್ಲಿ ನಾನು ವಿವರಿಸಿದ್ದೇನೆ, ಕಾಂಗ್ರೆಸ್ ನನಗೆ ಹಲವು ಅವಕಾಶಗಳನ್ನು ನೀಡಿದೆ., ನನ್ನ 30 ವರ್ಷಗಳ ರಾಜಕೀಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ನಾನು ಯಾವುದೇ ಬೇಡಿಕೆಯಿಟ್ಟಿಲ್ಲ. ಪಕ್ಷ ತೊರೆದಿದ್ದಕ್ಕೆ ನನ್ನನ್ನು ಕಾಂಗ್ರೆಸ್ ಅಧ್ಯಕ್ಷರು ಕ್ಷಮಿಸುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ನ ನಾಯಕತ್ವವನ್ನು ಕಟು ನುಡಿಗಳಿಂದ ಟೀಕಿಸಿದ್ದರು. ಕಾಂಗ್ರೆಸ್ ಕಣ್ಣು ಮುಚ್ಚಿಕೊಂಡು ಮುಂದೆ ಸಾಗುತ್ತಿದೆ ಎಂದು ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿದ್ದರು.
ಸುಶ್ಮಿತಾ ದೇವ್ ಕಾಂಗ್ರೆಸ್ ತೊರೆದಿದ್ದಾರೆ. ಪಕ್ಷದ ಕಿರಿಯ ಸದಸ್ಯರು ಕಾಂಗ್ರೆಸ್ ಬಿಟ್ಟುಹೋಗುತ್ತಿದ್ದರೆ ನಮ್ಮಂಥ ಹಿರಿಯರು ಪಕ್ಷವನ್ನು ಬಲಪಡಿಸುವ ಶ್ರಮ ಹಾಕಿದರೆ ದೂಷಣೆಗೆ ಒಳಗಾಗುತ್ತಿದ್ದೇವೆ. ಪಕ್ಷವು ಕಣ್ಣು ಮುಚ್ಚಿಕೊಂಡು ಮುಂದೆ ಹೋಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ