ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಪ್ರಕರಣ ದಾಖಲು, 540 ಸಾವು

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.  

ಚೇತರಿಕೆ ಪ್ರಮಾಣ ಶೇ 97.54 ರಷ್ಟಿದ್ದು, ಕಳೆದ 150 ದಿನಗಳಲ್ಲಿ ಕಡಿಮೆ ಎನ್ನುವಂತೆ 3,63,605 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಹೊಸ ಸಾವಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,33,589ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com