ರಾಮನಾಥ್ ಕೋವಿಂದ್
ರಾಮನಾಥ್ ಕೋವಿಂದ್

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ

ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ. 
Published on

ನವದೆಹಲಿ: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ. 

ಸಂವಿಧಾನದ 105 ನೇ ತಿದ್ದುಪಡಿಯ ಈ ಮಸೂದೆಯನ್ನು ಒಬಿಸಿ ಮಸೂದೆಯೆಂದೇ ಹೇಳಲಾಗುತ್ತದೆ. ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು.

ಈ ತಿದ್ದುಪಡಿಯ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಕಾನೂನು ಸಮ್ಮತವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆಯಲಿದ್ದು ಕೇಂದ್ರದ ಪಟ್ಟಿಗಿಂತಲೂ ಭಿನ್ನವಾದ ಪಟ್ಟಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಸಂಸತ್ ನ ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಶ್ಲಾಷಿಸಿದ ಪ್ರಧಾನಿ ನರೇಂದ್ರ ಮೋದಿ ದೇಶದ ಪಾಲಿನ ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com