ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅವಂತಿಪೋರಾದಲ್ಲಿ ಎನ್ಕೌಂಟರ್: 3 ಜೆಇಎಂ ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ನಾಗಬೀರನ್ ತ್ರಾಲ್'ನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. 

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

Related Stories

No stories found.

Advertisement

X
Kannada Prabha
www.kannadaprabha.com