ಕೇಂದ್ರ ಸಚಿವ ನಾರಾಯಣ್ ರಾಣೆ ವಿರುದ್ಧ 42 ಎಫ್ ಐಆರ್ ದಾಖಲಿಸಿದ ಮುಂಬೈ ಪೊಲೀಸರು

ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ನಾರಾಯಣ್ ರಾಣೆ ಅವರ ಜನಾ ಆಶೀರ್ವಾದ ಯಾತ್ರೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಒಟ್ಟಾರೇ 42 ಎಫ್ ಐಆರ್ ಗಳನ್ನು ಮುಂಬೈ ಪೊಲೀಸರು ದಾಖಲಿಸಿದ್ದಾರೆ.  
ಕೇಂದ್ರ ಸಚಿವ ನಾರಾಯಣ್ ರಾಣೆ
ಕೇಂದ್ರ ಸಚಿವ ನಾರಾಯಣ್ ರಾಣೆ

ಮುಂಬೈ:  ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ನಾರಾಯಣ್ ರಾಣೆ ಅವರ ಜನಾ ಆಶೀರ್ವಾದ ಯಾತ್ರೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಒಟ್ಟಾರೇ 42 ಎಫ್ ಐಆರ್ ಗಳನ್ನು ಮುಂಬೈ ಪೊಲೀಸರು ದಾಖಲಿಸಿದ್ದಾರೆ.  ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಈ ಎಫ್ ಐಆರ್ ದಾಖಲಿಸಲಾಗಿದೆ. 

ಮುಂಬೈಯ ವಿವಿಧ ಕಡೆಗಳಲ್ಲಿ ನಡೆದ ಬಿಜೆಪಿ ಜನ ಆಶೀರ್ವಾದ ಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ನಾರಾಯಣ್ ರಾಣೆ ಹಾಗೂ ಪಕ್ಷದ ಕಾರ್ಯಕರ್ತರು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. 

ಕೋವಿಡ್-19 ನಿಯಮ ಉಲ್ಲಂಘನೆಗಾಗಿ ಬಿಜೆಪಿ ರ್‍ಯಾಲಿ ವಿರುದ್ಧ ಈ ಹಿಂದೆ ಮಹಾರಾಷ್ಟ್ರ ಸರ್ಕಾರ 17 ಎಫ್ ಐ ಆರ್ ಗಳನ್ನು ದಾಖಲಿಸಿತ್ತು. ಮುಂಬೈಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 20 ರವರೆಗೂ ನಾರಾಯಣ್ ರಾಣೆ ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ 19 ಎಫ್ ಐಆರ್ ದಾಖಲಿಸಲಾಗಿದೆ. 

ಮುಂಬೈ ಪೊಲೀಸರಿಂದ ನಿರ್ಬಂಧದ ನಡುವೆಯೂ ರಾಣೆ ಆಗಸ್ಟ್ 19 ರಿಂದ ಮುಂಬೈಯಲ್ಲಿ ಜನ ಆಶೀರ್ವಾದ ಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿನ ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಅನೇಕ ಪ್ರತಿಪಕ್ಷಗಳ ಮುಖಂಡರು ಈ ಯಾತ್ರೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com