ಸಂಗ್ರಹ ಚಿತ್ರ
ದೇಶ
ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಜಮ್ಮು-ಕಾಶ್ಮೀರ ಪೊಲೀಸರು!
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಲೂಚಿ ಬಾಗ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಲೂಚಿ ಬಾಗ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಶ್ರೀನಗರ ನಗರದಲ್ಲಿ ಜೆಕೆಪಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಹತ್ಯೆಗೀಡಾದವರನ್ನು ಲಷ್ಕರ್-ಇ-ತೊಯ್ಬಾ ಸಂಘಟನೆಯ ಉನ್ನತ ಕಮಾಂಡರ್‌ಗಳೆಂದು ಗುರುತಿಸಲಾಗಿದೆ. ಅಬ್ಬಾಸ್ ಶೇಖ್ ಮತ್ತು ಆತನ ಎರಡನೇ ಕಮಾಂಡ್ ಸಕೀಬ್ ಮಂಜೂರ್ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ