ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಮೇಘಾಲಯ ಮಾಜಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ
ಗುವಾಹಟಿ: ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್‌ಗೆ ಸ್ಥಳೀಯ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.
ವಿಶೇಷ ನ್ಯಾಯಾಲಯ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಥವಾ ಪೋಕ್ಸೊ)ದ ನ್ಯಾಯಾಧೀಶರು, ಅಪರಾಧಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ ಹಾಗೂ 15 ಲಕ್ಷ ದಂಡ ಸಹ ವಿಧಿಸಿದ್ದಾರೆ.
ಆಗಸ್ಟ್ 13 ರಂದು ಮಾಜಿ ಶಾಸಕ ಡೋರ್ಫಾಂಗ್ ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ, ಮಂಗಳವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಶಿಕ್ಷ ಪ್ರಕಟವಾಗುತ್ತಿದ್ದಂತೆ ಕಾಮುಕ ಮಾಜಿ ಶಾಸಕನನ್ನು ಬಂಧಿಸಿ ಜೈಲಿಗೆ ಸ್ಥಳಾಂತರಿಸಲಾಗಿದೆ.
ಇದೇ ಪ್ರಕರಣದಲ್ಲಿ ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮುಂದಿನ ವಾರ ಮೇಘಾಲಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಡೋರ್ಫಾಂಗ್ ಪರ ವಕೀಲ ಕಿಶೋರ್ ಚಿ ಗೌತಮ್ ಅವರು ಹೇಳಿದ್ದಾರೆ.
2017 ರಲ್ಲಿ ಜೂಲಿಯಸ್ ಅವರು ಶಾಸಕರಾಗಿದ್ದ ವೇಳೆ 14 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿತ್ತು. ಬಳಿಕ ಅವರು ನಾಪತ್ತೆಯಾಗಿದ್ದರು. ನಂತರ ಅವರನ್ನ ಗುವಾಹಟಿಯಲ್ಲಿ ಪತ್ತೆ ಮಾಡಿ ಬಂಧಿಸಲಾಗಿತ್ತು.
ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮಾಜಿ ಶಾಸಕನನ್ನು ಬಂಧನಕ್ಕೊಳಪಡಿಸಲಾಗಿತ್ತು. 2020ರಲ್ಲಿ ವೈದ್ಯಕೀಯ ಕಾರಣಕ್ಕಾಗಿ ಮೇಘಾಲಯ ಹೈಕೋರ್ಟ್ನಿಂದ ಅವರಿಗೆ ಜಾಮೀನು ಸಿಕ್ಕಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ