ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್  ಮಾಂಡವೀಯಾ ಬುಧವಾರ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಸೆಪ್ಟೆಂಬರ್ 5ರ  ಶಿಕ್ಷಕರ ದಿನಾಚರಣೆಗೂ ಮುಂಚಿತವಾಗಿ ಎಲ್ಲಾ ಶಾಲಾ ಶಿಕ್ಷಕರಿಗೂ ಆದ್ಯತೆ ಮೇರೆಗೆ  ಲಸಿಕೆ ಹಾಕಲು ಪ್ರಯತ್ನಿಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೇಳಿಕೊಂಡಿರುವುದಾಗಿ ತಿಳಿಸಿದ್ದಾರೆ. 

ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಲಸಿಕೆ ಪೂರೈಕೆ ಯೋಜನೆ ಹೊರತಾಗಿಯೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಲಸಿಕೆ ಲಭ್ಯವಿರುವಂತೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಾರ, ಈವರೆಗೂ 58.07 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com