ಜೆಎನ್‌ಯು ಕ್ಯಾಂಪಸ್‌ನಲ್ಲಿ 26 ವರ್ಷದ ಮಹಿಳೆಯ ನಿಗೂಢ ಸಾವು!

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು) ಕ್ಯಾಂಪಸ್‌ನಲ್ಲಿ ವಾಸಿಸುತ್ತಿದ್ದ 26 ವರ್ಷದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು) ಕ್ಯಾಂಪಸ್‌ನಲ್ಲಿ ವಾಸಿಸುತ್ತಿದ್ದ 26 ವರ್ಷದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಬಕ್ಸಾರ್ ನಿವಾಸಿಯಾಗಿರುವ ಮಾಧುರಿ ಕುಮಾರಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದೊಳಗಿನ ಬ್ರಹ್ಮಪುತ್ರ ಹಾಸ್ಟೆಲ್‌ನಲ್ಲಿ ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದು ಆಕೆ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಮರಣೋತ್ತರ ಪರೀಕ್ಷೆಯಿಂದ ಮಾತ್ರ ಸಾವಿಗೆ ಕಾರಣ ತಿಳಿಯುತ್ತದೆ ಹೇಳಿದರು. 

ಯಾವುದೇ ಡೇಟ್ ನೋಟ್ ಪತ್ತೆಯಾಗಿಲ್ಲ. ಇನ್ನು ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸ್ಟೆಲ್ ಮೇಲಿನಿಂದ ಮಹಿಳೆ ಬಿದ್ದಿದ್ದು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ. 

ಘಟನೆ ನಂತರ ಆಸ್ಪತ್ರೆಯ ಆಡಳಿತ ಮಂಡಳಿ ನಮಗೆ ಮಾಹಿತಿ ನೀಡಿತು ಎಂದು ನೈರುತ್ಯ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣದ ನಿಖರ ಕಾರಣವನ್ನು ಶವಪರೀಕ್ಷೆಯ ವರದಿಯ ಮೂಲಕ ತಿಳಿದುಬರಲಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com