ದೇಶದಲ್ಲಿ ಮತ್ತೆ ಕೊರೋನಾ ಏರಿಕೆ: ಕಳೆದ 24 ಗಂಟೆಗಳಲ್ಲಿ 44,658 ಹೊಸ ಪ್ರಕರಣ ಪತ್ತೆ, 496 ಸಾವು ದಾಖಲು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ. 32,988 ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 3, 18,21,428ಕ್ಕೆ ಏರಿಕೆಯಾಗಿದೆ.

 496 ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,36,861ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ಸದ್ಯ 3,44,899 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ದಿನ 18,24,931 ಮಾದರಿಗಳ ಪರೀಕ್ಷೆ ಸೇರಿದಂತೆ ಒಟ್ಟಾರೇ, 51,49,54,309 ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ 78,48,439 ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ಒಟ್ಟಾರೇ, 61, 22,08,542 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com