ಉತ್ತರಾಖಂಡದಲ್ಲಿ ಮತ್ತೊಂದು ಭೂ ಕುಸಿತ: ಇಬ್ಬರು ಸಾವು, 5 ಮಂದಿ ನಾಪತ್ತೆ

ಶಿಖರಗಳ ನಾಡು ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಾಖಂಡ ಭೂ ಕುಸಿತ
ಉತ್ತರಾಖಂಡ ಭೂ ಕುಸಿತ
Updated on

ಡೆಹ್ರಾಡೂನ್: ಶಿಖರಗಳ ನಾಡು ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯ ಜುಮ್ಮಾ ಗ್ರಾಮದಬಳಿ ಭೂಕುಸಿತದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಐವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ರಾಜ್ಯ ವಿಪತ್ತು ನಿಗ್ರಹ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 

ಇನ್ನು ಈ ವಿಚಾರವಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೋಮವಾರ ಟ್ವೀಟ್ ಮಾಡಿದ್ದು, 'ಪಿಥೋರಘಡ ಜಿಲ್ಲೆಯ ಜುಮ್ಮಾ ಹಳ್ಳಿಯ ಬಳಿ ಭೂಕುಸಿತದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 5 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ, ಜಿಲ್ಲಾ ಮ್ಯಾಜಿಸ್ಟ್ರೇಟ್‌ನೊಂದಿಗೆ ತಾವು ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಸೂಚನೆಗಳನ್ನು ನೀಡಲಾಗಿದೆ. ಅಲ್ಲಿ ಸಿಲುಕಿರುವ ಜನರ ಸುರಕ್ಷತೆಗಾಗಿ ದೇವರಿಗೆ ಪ್ರಾರ್ಥಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com