ತಮಿಳುನಾಡು: ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಅರಿಯಲೂರು ಜಿಲ್ಲಾ ಬಿಜೆಪಿ ಅಧ್ಯಕ್ಷನ ಬಂಧನ

ಡಿಸೆಂಬರ್ 1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಅಯ್ಯಪ್ಪನ್ ಅವರನ್ನು ಅರಿಯಲೂರು ಪೊಲೀಸರು ಬಂಧಿಸಿದ್ದಾರೆ.
ಕೆ.ಅಯ್ಯಪ್ಪನ್
ಕೆ.ಅಯ್ಯಪ್ಪನ್
Updated on: 

ಅರಿಯಲೂರು: ಡಿಸೆಂಬರ್ 1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಅಯ್ಯಪ್ಪನ್ ಅವರನ್ನು ಅರಿಯಲೂರು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಅಯ್ಯಪ್ಪನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಭಾಷಣ ಮಾಡಿದ ಅಯ್ಯಪ್ಪನ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಂಧನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರ ವಿಫಲವಾದರೆ ನಮ್ಮ ರಾಜ್ಯಾಧ್ಯಕ್ಷರ ಆದೇಶದಂತೆ ಆತ್ಮಾಹುತಿ ದಾಳಿ ನಡೆಸಲೂ ಸಿದ್ಧ ಎಂದು ಬೆದರಿಕೆ ಹಾಕಿದರು. ಅವರ ಪ್ರಚೋದನಕಾರಿ ಭಾಷಣದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಾಲಾಜಾನಗರದ ವಿಎಒ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶುಕ್ರವಾರ ಜಯಂಕೊಂಡಂನಲ್ಲಿರುವ ಅವರ ನಿವಾಸದಿಂದ ಅಯ್ಯಪ್ಪನನ್ನು ಬಂಧಿಸಿದ್ದಾರೆ.

ಐಪಿಸಿ ಸೆಕ್ಷನ್ 504 ಒಳಗೊಂಡಿರುವ ಆರು ಸೆಕ್ಷನ್‌ಗಳ ಅಡಿಯಲ್ಲಿ ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಬಂಧಿತ ಬಿಜೆಪಿ ನಾಯಕನನ್ನು ಅರಿಯಲೂರು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಜಯನಕೊಂಡಂ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com