ಈ ರಾಹುಲ್ ಗಾಂಧಿ ಅಂದರೆ ಯಾರು? ನನಗೆ ಆತನ ಪರಿಚಯವಿಲ್ಲ: ಅಸಾದುದ್ದೀನ್ ಓವೈಸಿ

ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಶುಕ್ರವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷವು ಒಡೆದು ಹೋಗುತ್ತದೆ ಎಂದಿದ್ದಾರೆ.
ರಾಹುಲ್ ಗಾಂಧಿ-ಓವೈಸಿ
ರಾಹುಲ್ ಗಾಂಧಿ-ಓವೈಸಿ
Updated on

ನವದೆಹಲಿ: ಎಐಎಂಐಎಂ ನಾಯಕ  ಅಸಾದುದ್ದೀನ್ ಓವೈಸಿ ಶುಕ್ರವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷವು ಒಡೆದು ಹೋಗುತ್ತದೆ ಎಂದಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಹಲವಾರು ರಾಜ್ಯಗಳಲ್ಲಿ ಏಕಕಾಲದಲ್ಲಿ ವಿಸ್ತರಿಸುವ ಪ್ರಯತ್ನವನ್ನು ಉಲ್ಲೇಖಿಸಿದ ಓವೈಸಿ, ಅವರು ಇತರ ರಾಜ್ಯಗಳಲ್ಲಿ ಹೋರಾಟವನ್ನು ಮುಂದುವರಿಸಬೇಕು ಮತ್ತು ಕಾಂಗ್ರೆಸ್‌ ಎರಡು ಮೂರು ವರ್ಷದಲ್ಲಿ ಒಡೆದು ಚೂರಾಗುತ್ತದೆ ಎಂದರು. 

ಓವೈಸಿಗೆ ರಾಹುಲ್ ಗಾಂಧಿ ನಾಯಕತ್ವದಲ್ಲಿ ನಂಬಿಕೆ ಇಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಯಾರು? ನನಗೆ ಆತನ ಪರಿಚಯವಿಲ್ಲ. ಅವರು ಯಾರೆಂದು ನಿಮಗೆ ತಿಳಿದಿದ್ದರೆ ದಯವಿಟ್ಟು ನನಗೆ ತಿಳಿಸಿ ಎಂದು ಓವೈಸಿ ಹೇಳಿದರು.

ಓವೈಸಿಗೆ ಪ್ರಶ್ನೆಗೆ ಉತ್ತರಿಸಿದ ತ್ರಿವೇದಿ, ಎಐಎಂಐಎಂನಂತಹ ಪಕ್ಷಗಳು ಮತ್ತು ಓವೈಸಿಯಂತಹ ನಾಯಕರು ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com