ಸರಯೂ ಯೋಜನೆ
ಸರಯೂ ಯೋಜನೆ

ಸರಯೂ ನಹರ್ ರಾಷ್ಟ್ರೀಯ ಯೋಜನೆ ನಾಳೆ ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆ

 ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗಿರುವ ಸರಯೂ ನಹರೂ ರಾಷ್ಟ್ರೀಯ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ.
Published on

ನವದೆಹಲಿ: ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗಿರುವ ಸರಯೂ ನಹರೂ ರಾಷ್ಟ್ರೀಯ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ.

ಸುಮಾರು 9800 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ 4600 ಕೋಟಿ ರೂ. ಒದಗಿಸಲಾಗಿದೆ. ಈ ಯೋಜನೆಯಡಿ ಈ ಪ್ರದೇಶದ ನೀರಿನ ಸಂಪನ್ಮೂಲಗಳನ್ನು ಬಳಸಿಕೊಳ್ಳಲು  ಘಾರ್ಗಾ, ಸರಯೂ, ರಾಫ್ತಿ, ಬಂಗಂಗಾ ಮತ್ತು ರೋಹಿನ್ ನದಿಗಳನ್ನು ಸಂಪರ್ಕಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಇದು ಉತ್ತರಪ್ರದೇಶದಲ್ಲಿಯೇ ಅತ್ಯಂತ ದೊಡ್ಡ ನಾಲಾ ಯೋಜನೆ ಎನಿಸಲಿದ್ದು, ಇಲ್ಲಿನ 9 ಜಿಲ್ಲೆಗಳಾದ ಬಹ್ರೈಚ್, ಗೊಂಡಾ, ಶ್ರಾವಸ್ತಿ, ಬಲರಾಮ್‌ಪುರ, ಬಸ್ತಿ, ಸಿದ್ಧಾರ್ಥನಗರ, ಸಂತ ಕಬೀರ್ ನಗರ, ಗೋರಖ್‌ಪುರ ಮತ್ತು ಮಹಾರಾಜ್‌ಗಂಜ್​​ಗಳ ಸುಮಾರು 25- 30 ಲಕ್ಷ ರೈತರಿಗೆ ನೀರಾವರಿ ಅನುಕೂಲ ಮಾಡಿಕೊಡಲಿದೆ

.ಒಟ್ಟಾರೆ 14.04 ಲಕ್ಷ ಹೆಕ್ಟೇರ್​ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುತ್ತದೆ. 6200 ಗ್ರಾಮಗಳ 29 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಪಿಎಂಒ ಕಚೇರಿ ತಿಳಿಸಿದೆ. 

X

Advertisement

X
Kannada Prabha
www.kannadaprabha.com