ಶ್ರೀನಗರ: ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ದಾಳಿ- ಇಬ್ಬರು ಸಾವು, 12ಮಂದಿಗೆ ಗಾಯ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, 14 ಮಂದಿಗೆ ಗಾಯಗಳಾಗಿವೆ. 
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ದಾಳಿ ನಡೆದ ಘಟನಾ ಸ್ಥಳ
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ದಾಳಿ ನಡೆದ ಘಟನಾ ಸ್ಥಳ
Updated on

ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. 

ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಂಜೆ ವೇಳೆ ಪಂಥಾ ಚೌಕ್ ಬಳಿಯ ಝೆವಾನ್ ನಲ್ಲಿ ಈ ದಾಳಿ ನಡೆದಿದ್ದು, 12 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 

ಘಟನಾ ಪ್ರದೇಶವನ್ನು ಸಂಪೂರ್ಣ ಪೊಲೀಸ್, ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದು, ಉಗ್ರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com