ಕೇರಳ: ರಿಕ್ಷಾದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ; ಪೊಲೀಸರಿಗೆ ಸಾರ್ವಜನಿಕರ ಸಾಥ್

ಈ ಹಿಂದೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಮದ್ಯ ಹಾಗೂ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಪೊಲೀಸರ ಗಮನಕ್ಕೆ ತರಬೇಕಾಗಿ ಪ್ರಕಟಣೆ ಹೊರಡಿಸಲಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೊಚ್ಚಿ: ರಿಕ್ಷಾದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಅಧಿಕಾರಿಗಳು ಕೇರಳದ ಚಿರಕ್ಕಾಡು ಎಂಬಲ್ಲಿ ಬಂಧಿಸಿದ್ದಾರೆ. 

ಖಚಿತ ಸುಳಿವಿನ ಆಧಾರದ ಮೇಲೆ ಅಧಿಕಾರಿಗಳು ಧಾಳಿ ನಡೆಸಿದ್ದರು. ಆರೋಪಿ ಅಭಿಲಾಶ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. 

ಈ ಹಿಂದೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಮದ್ಯ ಹಾಗೂ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಪೊಲೀಸರ ಗಮನಕ್ಕೆ ತರಬೇಕಾಗಿ ಪ್ರಕಟಣೆ ಹೊರಡಿಸಲಾಗಿತ್ತು. ಅಲ್ಲದೆ ನಿರ್ದಿಷ್ಟ ಫೋನ್ ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿತ್ತು. 

ಪೊಲೀಸರ ಪ್ರಕಟಣೆ ನಂತರ ಸಾರ್ವಜನಿಕರಿಂದ ಒಳ್ಳೆಯ ಸ್ಪಂದನೆ ಹಾಗೂ ಸಹಕಾರ ಲಭ್ಯವಾಗುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com