ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಪುಲ್ವಾಮದ ರಾಜ್ಪುರ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com