ಭಾರತೀಯ ಸೈನಿಕರ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಕೊಂದು ಒತ್ತೆಯಾಳು ಬಾಲಕಿಯರ ರಕ್ಷಣೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಾಲಕಿಯರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಾಲಕಿಯರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ರೆದ್ವಾನಿ ಬಾಲಾ ಗ್ರಾಮದ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಇಬ್ಬರು ಬಾಲಕಿಯನ್ನು ಒತ್ತಾಯಾಳಾಗಿರಿಸಿಕೊಂಡಿದ್ದರು. ಉಗ್ರರ ಅವಿತಿರುವಿಕೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ.

ಈ ವೇಳೆ ಉಗ್ರರು ಸೈನಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು ಸೈನಿಕರ ಗುಂಡಿನ ದಾಳಿಗೆ ಉಗ್ರರು ಸಾವನ್ನಪ್ಪಿದ್ದಾರೆ. ಮೃತ ಉಗ್ರರನ್ನು ಅಮೀರ್ ಬಶೀರ್ ದಾರ್ ಮತ್ತು ಆದಿಲ್ ಯೂಸುಫ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಕುಲ್ಗಾಮ್ ನಿವಾಸಿಗಳು ಎಂದು ಶ್ರೀನಗರ ರಕ್ಷಣಾ ಪಿಆರ್ ಒ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com