ದೆಹಲಿಯಲ್ಲಿ ಮತ್ತೆ ಇಬ್ಬರಿಗೆ ಓಮಿಕ್ರಾನ್ ಪಾಸಿಟಿವ್, ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್‌-19 ಹೊಸ ರೂಪಾಂತರಿ ಓಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತೆ ಎರಡು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌-19 ಹೊಸ ರೂಪಾಂತರಿ ಓಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತೆ ಎರಡು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಒಟ್ಟು 24 ಓಮಿಕ್ರಾನ್ ಸೋಂಕಿತರಲ್ಲಿ  12 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ದೆಹಲಿಯಲ್ಲಿ ಇನ್ನೂ ಎರಡು ಓಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಈ ಹಿಂದೆ ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾದ ಅವರ ಮಾದರಿಗಳು ಪಾಸಿಟಿವ್ ಬಂದಿವೆ. ಈ ಇಬ್ಬರಲ್ಲಿ ಒಬ್ಬರು ಬ್ರಿಟನ್ ನಿಂದ ಬಂದಿದ್ದರೆ, ಇನ್ನೊಬ್ಬರು ಘಾನಾದಿಂದ ಬಂದಿದ್ದಾರೆ" ಎಂದು ಮೂಲವೊಂದು ತಿಳಿಸಿದೆ.

ದಾಖಲಾದ ಹೆಚ್ಚಿನ ರೋಗಿಗಳು ಲಕ್ಷಣರಹಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com