ದೇಶದಲ್ಲಿ 213 ಓಮಿಕ್ರಾನ್ ಕೇಸು ಪತ್ತೆ: ಕಳೆದ 24 ಗಂಟೆಗಳಲ್ಲಿ 6,317 ಹೊಸ ಕೋವಿಡ್ ಪ್ರಕರಣ, 318 ಮಂದಿ ಸಾವು

ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ಈಗಾಗಲೇ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿಅಂಶದಂತೆ ದೇಶದಲ್ಲಿ ಇದುವರೆಗೆ 213 ಓಮಿಕ್ರಾನ್ ಕೇಸುಗಳು ವರದಿಯಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ಈಗಾಗಲೇ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿಅಂಶದಂತೆ ದೇಶದಲ್ಲಿ ಇದುವರೆಗೆ 213 ಓಮಿಕ್ರಾನ್ ಕೇಸುಗಳು ವರದಿಯಾಗಿವೆ. ನಿನ್ನೆಯವರೆಗೆ 200 ಪ್ರಕರಣಗಳಿದ್ದವು. ಒಂದೇ ದಿನದಲ್ಲಿ 13 ಕೇಸುಗಳು ಹೆಚ್ಚಾಗಿವೆ.

ಓಮಿಕ್ರಾನ್ ನಿಂದ ಬಾಧಿತರಾಗುವ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಸಂಗ್ರಹಿಸುವುದಕ್ಕಾಗಿ ಕೋವಿಡ್-19 ವಾರ್ ರೂಮ್ ಗಳನ್ನು ಪುನಾರಂಭಗೊಳಿಸಲು ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. 

ಕರ್ನಾಟಕದಲ್ಲಿ 15 ಪ್ರಕರಣ: ಒಟ್ಟು 213 ಓಮಿಕ್ರಾನ್ ಪ್ರಕರಣಗಳಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 57 ಮತ್ತು 54 ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ 15 ಕೇಸುಗಳು ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇಲ್ಲಿಯವರೆಗೆ 90 ರೋಗಿಗಳು ಓಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 

ಕೋವಿಡ್ ಮೂರನೇ ಅಲೆಯ ಈ ಹೊತ್ತಿನಲ್ಲಿ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6 ಸಾವಿರದ 317 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಮೊನ್ನೆಗಿಂತ ಸುಮಾರು 1 ಸಾವಿರದಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 318 ಮಂದಿ ಕಳೆದ 24 ಗಂಟೆಗಳಲ್ಲಿ ಮೃಪಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6 ಸಾವಿರದ 317 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 78 ಸಾವಿರದ 190ಕ್ಕೆ ಇಳಿಕೆ ಆಗಿದೆ.

ಕಳೆದ 24 ಗಂಟೆಗಳಲ್ಲಿ 6.906 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಇದುವರೆಗೆ ಒಟ್ಟಾರೆಯಾಗಿ 3 ಕೋಟಿಯ 42 ಲಕ್ಷದ 01 ಸಾವಿರದ 966 ಮಂದಿ ಗುಣಮುಖರಾಗಿದ್ದಾರೆ. ಗುಣಮುಖ ಹೊಂದಿದವರ ಪ್ರಮಾಣ ಶೇಕಡಾ 98.40ರಷ್ಟಾಗಿದ್ದು ಕಳೆದ ವರ್ಷ ಮಾರ್ಚ್ ನಿಂದ ಅತಿ ಕಡಿಮೆಯಾಗಿದೆ.

ದೇಶದ ಸಕ್ರಿಯ ಸೋಂಕಿತರ ಸಂಖ್ಯೆ 78 ಸಾವಿರದ 190 ಇದ್ದು ಕಳೆದ 575 ದಿನಗಳಲ್ಲಿ ಅತಿ ಕಡಿಮೆಯಾಗಿದೆ. ದೇಶದಲ್ಲಿ ಕೋವಿಡ್ ವೈರಸ್ ನ ವಿರುದ್ಧ ಹೋರಾಡಲು ಲಸಿಕಾ ಅಭಿಯಾನ ಆರಂಭವಾದ ನಂತರ ಇಲ್ಲಿಯವರೆಗೆ 138 ಕೋಟಿಯ 96 ಲಕ್ಷ ಡೋಸ್ ಲಸಿಕೆ ವಿತರಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 57 ಲಕ್ಷ ಡೋಸ್ ಗಳನ್ನು ನೀಡಲಾಗಿದೆ. ಇದುವರೆಗೆ ದೇಶದಲ್ಲಿ 66 ಕೋಟಿಯ 74 ಲಕ್ಷ ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com