ಅಖಿಲೇಶ್​ ಯಾದವ್​​ ಪತ್ನಿ, ಮಗಳಿಗೆ ಕೊರೋನಾ ಪಾಸಿಟಿವ್: ಫೋನ್​ನಲ್ಲಿ ಆರೋಗ್ಯ ವಿಚಾರಿಸಿದ ಸಿಎಂ ಯೋಗಿ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​​ ಅವರ ಪತ್ನಿ, ಮಾಜಿ ಸಂಸದೆ ಡಿಂಪಲ್ ಯಾದವ್ ಹಾಗೂ ಅವರ ಮಗಳಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on: 

ಲಖನೌ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​​ ಅವರ ಪತ್ನಿ, ಮಾಜಿ ಸಂಸದೆ ಡಿಂಪಲ್ ಯಾದವ್ ಹಾಗೂ ಅವರ ಮಗಳಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಖಿಲೇಶ್ ಯಾದವ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿ, ಆರೋಗ್ಯ ವಿಚಾರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಅಖಿಲೇಶ್ ಯಾದವ್​ ಕೂಡ ಕೊರೋನಾ ಪರೀಕ್ಷೆ ಮಾಡಿಸಿದ್ದು, ಅವರಿಗೆ ನೆಗೆಟಿವ್​​ ಬಂದಿದೆ ಎಂದು ಸಮಾಜವಾದಿ ಪಕ್ಷ ತಿಳಿಸಿದೆ.

ಅಖಿಲೇಶ್ ಯಾದವ್ ಅವರ ಕುಟುಂಬ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಹಾರೈಸಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಅವರ ಕಚೇರಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

ನಾನು ಕೋವಿಡ್ ಪರೀಕ್ಷೆಯನ್ನು ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್​​ ಬಂದಿದೆ. ನಾನು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದೇನೆ ಮತ್ತು ಯಾವುದೇ ರೋಗಲಕ್ಷಣಗಳು ಇಲ್ಲ. ನನ್ನ ಮತ್ತು ಇತರರ ಸುರಕ್ಷತೆಗಾಗಿ ನಾನು ಪ್ರತ್ಯೇಕವಾಗಿದ್ದೇನೆ ಎಂದು ಡಿಂಪಲ್ ಯಾದವ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ತಮ್ಮನ್ನು ಭೇಟಿಯಾದ ಎಲ್ಲರೂ ಕೋವಿಡ್ ಪರೀಕ್ಷೆಯನ್ನು ಶೀಘ್ರವಾಗಿ ಮಾಡಿಸಿಕೊಳ್ಳಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.

ಅಖಿಲೇಶ್ ಯಾದವ್ ಅವರು ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ. ಅವರ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಲಸಿಕೆ ಪಡೆಯಲು ನಿರ್ಧರಿಸಿದ ನಂತರ ಅವರು ಲಸಿಕೆ ಹಾಕಿಸಿಕೊಳ್ಳುವುದಾಗಿ ಹೇಳಿದ್ದರು.

ಉತ್ತರ ಪ್ರದೇಶ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಿರುವ ಅಖಿಲೇಶ್ ಯಾದವ್ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.

“ಕುಟುಂಬದ ಸದಸ್ಯರಿಗೆ ಕೊರೋನಾ ವೈರಸ್‌ ಪಾಸಿಟಿವ್ ಬಂದಿರುವುದರಿಂದ ಮುನ್ನೆಚ್ಚರಿಕೆಯಾಗಿ ನಾನು ಮೂರು ದಿನಗಳವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುವುದಿಲ್ಲ ಎಂದು ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ನಡೆದ ಸಂದರ್ಶನವೊಂದರಲ್ಲಿ, ಅಖಿಲೇಶ್ ಯಾದವ್ ಅವರು ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕಿದರೆ ಮಾತ್ರ ಕೊರೋನಾ ಲಸಿಕೆ ತೆಗೆದುಕೊಳ್ಳುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com