
ಮುಂಬೈ: ರೈತರ ಪ್ರತಿಭಟನೆಯನ್ನು ಪ್ರತ್ಯೇಕತಾವಾದಿ ಗುಂಪಿ ಹೋಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಗುರುವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ರೈತರ ವಿರುದ್ಧ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕಂಗನಾ ರನೌತ್ ಅವರು ಇಂದು ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.
ಕಂಗನಾ ರನೌತ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾರ್ ಪೊಲೀಸ್ ಠಾಣೆಗೆ ಆಗಮಿಸಿದರು. ಕಂಗನಾ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿಲು ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎಂದು ನಟಿಯ ಪರ ವಕೀಲ ರಿಜ್ವಾನ್ ಸಿದ್ದಿಕಿ ಹೇಳಿದ್ದಾರೆ.
ಸಿಖ್ ಸಂಘಟನೆಯೊಂದು ನೀಡಿದ ದೂರಿನ ಮೇರೆಗೆ ಕಳೆದ ತಿಂಗಳು ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ತಿಂಗಳ ಆರಂಭದಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್ ನೀಡಿದ್ದರು.
Advertisement