ಬಿಜೆಪಿ ಪಕ್ಷಕ್ಕೆ ತಲೆನೋವಾದ ಉತ್ತರಾಖಂಡ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಬೆದರಿಕೆ

ಇದರಿಂದ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರಾಖಂಡದಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.
ಹರಕ್ ಸಿಂಗ್ ರಾವತ್
ಹರಕ್ ಸಿಂಗ್ ರಾವತ್
Updated on

ಡೆಹ್ರಾಡೂನ್: ಉತ್ತರಾಖಂಡದ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆಗೆ ನಿರ್ಧರಿಸಿರುವ ವಿಚಾರ ಬಿಜೆಪಿಗೆ ಭಾರೀ ತಲೆನೋವಾಗಿ ಪರಿಣಮಿಸಿದೆ.

ಹರಕ್ ಸಿಂಗ್ ರಾವತ್ ತಮ್ಮ ನಿರ್ಣಯದಂತೆ ರಾಜೀನಾಮೆ ನೀಡಿದರೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರಾಖಂಡದಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಅರಣ್ಯ, ಪರಿಸರ, ಕಾರ್ಮಿಕ ಮತ್ತು ಉದ್ಯೋಗ ಖಾತೆಗಳನ್ನು ಹೊಂದಿರುವ ರಾವತ್ ಶುಕ್ರವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತಮ್ಮ ಕ್ಷೇತ್ರವಾದ ಕೋಟ್ ದ್ವಾರದಲ್ಲಿ ಪ್ರಸ್ತಾವಿತ ವೈದ್ಯಕೀಯ ಕಾಲೇಜು ಕುರಿತು ರಾಜ್ಯ ಸರ್ಕಾರ ನಿಷ್ಕಾಳಜಿ ತೋರಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಹೊರನಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com