ಕ್ರಿಸ್'ಮಸ್ ಆಚರಣೆ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್, ರಾಜ್ಯಪಾಲ ಗೆಹ್ಲೋಟ್ ಶುಭಾಶಯ

ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸು ಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ಇಂದು ನಾವು ನೆನಪಿಸಿಕೊಳ್ಳುತ್ತಿದ್ದೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿಯನ್ನು ಹೊಂದಲಿ. ಎಲ್ಲೆಡೆ ಸಾಮರಸ್ಯವಿರಲಿ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ದೇಶದ ಎಲ್ಲಾ ನಾಗರಿಕರಿಗೆ, ವಿಶೇಷವಾಗಿ ಭಾರತ ಮತ್ತು ವಿದೇಶಗಳಲ್ಲಿರುವ ಕ್ರಿಶ್ಚಿಯನ್ ಸಹೋದರ ಸಹೋದರಿಯರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ಈ ಸಂತೋಷದಾಯಕ ಸಂದರ್ಭದಲ್ಲಿ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಆಧರಿಸಿದ ಸಮಾಜವನ್ನು ನಿರ್ಮಿಸಲು ಮತ್ತು ನಮ್ಮ ಜೀವನದಲ್ಲಿ ಯೇಸುಕ್ರಿಸ್ತನ ಬೋಧನೆಗಳನ್ನು ಅಳವಡಿಸಿಕೊಳ್ಳಲು ನಾವು ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ.

ವಿಶ್ವದಾದ್ಯಂತ ಕ್ರಿಸ್'ಮಸ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾತ್ರಿಯಿಂದಲೇ ಚರ್ಚ್'ಗಳಿಗೆ ತೆರಳಿ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಕ್ರಿಸ್'ಮಸ್ ಅಂಗವಾಗಿ ಚರ್ಚ್'ಗಳಿಗೆ ದೀಪಾಲಂಕಾಗಳನ್ನು ಮಾಡಲಾಗಿದ್ದು, ರಾತ್ರಿಯಿಂದಲೇ ಚರ್ಚ್'ಗಳಲ್ಲಿ ವಿಶೇಷ ಪ್ರವಚನ ನಡೆಸಲಾಗುತ್ತಿದೆ. ಯೇಸು ಪ್ರಭುವಿಗೆ ನಮನಗಳನ್ನು ಸಲ್ಲಿಸಲಾಗುತ್ತಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಭಾಶಯ
ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ರಾಜ್ಯದ ಸಮಸ್ತ ಜನರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. 

"ಕರ್ನಾಟಕ ರಾಜ್ಯದ ಎಲ್ಲಾ ನಾಗರಿಕರಿಗೆ, ವಿಶೇಷವಾಗಿ ನಮ್ಮ ಕ್ರಿಶ್ಚಿಯನ್ ಸಹೋದರ ಸಹೋದರಿಯರಿಗೆ ಕ್ರಿಸ್ಮಸ್ ಶುಭಾಶಯಗಳು. ಈ ಹಬ್ಬವು ಎಲ್ಲರಿಗೂ ಸಂತೋಷ ಮತ್ತು ಶಾಂತಿಯನ್ನು ತರಲಿ" ಎಂದು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com