ಕುರ್​ಕುರೆ-ನೂಡಲ್ಸ್​ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 5 ಮಂದಿ ಸಾವು, 10 ಮಂದಿಗೆ ಗಾಯ

ಕುರ್​ಕುರೆ ಮತ್ತು ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಜಾಫರ್‌ಪುರ: ಕುರ್​ಕುರೆ ಮತ್ತು ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ದುರ್ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮುಜಾಫರ್‌ಪುರ ಜಿಲ್ಲೆಯ ಬೇಲಾ ಕೈಗಾರಿಕಾ ಪ್ರದೇಶದಲ್ಲಿರುವ 'ಮೋದಿ ಕುರ್​ಕುರೆ ಮತ್ತು ನೂಡಲ್ಸ್ ಕಾರ್ಖಾನೆ'ಯಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಬಾಯ್ಲರ್ ಸ್ಫೋಟದ ಸದ್ದು 5 ಕಿ.ಮೀ ದೂರದವರೆಗೂ ಕೇಳಿ ಬಂದಿದ್ದು, ಸ್ಫೋಟದ ತೀವ್ರತೆಗೆ ಹತ್ತಿರದ ಹಲವಾರು ಕಾರ್ಖಾನೆಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com