ದೇಶದಲ್ಲಿ ಓಮಿಕ್ರಾನ್ ಸಂಖ್ಯೆ 578ಕ್ಕೆ ಏರಿಕೆ; ದೆಹಲಿಯಲ್ಲಿ 142 ಮಂದಿಗೆ ಹೊಸ ರೂಪಾಂತರಿ ಸೋಂಕು

ಭಾರತದಲ್ಲಿ ಓಮಿಕ್ರಾನ್ ಅಟ್ಟಹಾಸ ನಿರಮತರವಾಗಿ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ 156 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 578ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಅಟ್ಟಹಾಸ ನಿರಮತರವಾಗಿ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ 156 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 578ಕ್ಕೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 412 ಪ್ರಕರಣಗಳು ಪತ್ತೆಯಾಗಿದ್ದು, ದಿನೇ ದಿನೇ ಹೆಚ್ಚಳ ಕಾಣುತ್ತಲೇ ಇದೆ. ಇನ್ನು ಮಹಾರಾಷ್ಟ್ರದಲ್ಲಿ 141, ಗುಜರಾತ್ 49, ತೆಲಂಗಾಣ 41, ಕೇರಳ 57, ತಮಿಳುನಾಡಿನಲ್ಲಿ 34, ಕರ್ನಾಟಕ 31, ರಾಜಸ್ಥಾನ 43, ಉತ್ತರಪ್ರದೇಶ 2, ಮಧ್ಯಪ್ರದೇಶ 9, ಆಂಧ್ರಪ್ರದೇಶ 6, ಹರಿಯಾಣ 4, ಒಡಿಶಾ 4, ಚಂಡೀಗಢ 3, ಜಮ್ಮು ಮತ್ತು ಕಾಶ್ಮೀರ 3 ಹಾಗೂ ಉತ್ತರಖಂಡ್ ಲಡಾಕ್, ಹಿಮಾಚಲ ಪ್ರದೇಶ ತಲಾ 1 ಪ್ರಕರಣಗಳು ಪತ್ತೆಯಾಗಿವೆ.

ಓಮೈಕ್ರಾನ್‍ಗೆ ಜಾಗತಿಕ ಮಟ್ಟದಲ್ಲಿ ತುತ್ತಾದವರಲ್ಲಿ 10 ಮಂದಿಯಲ್ಲಿ ಒಂಭತ್ತು ಮಂದಿ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದಿದ್ದರು. ಆದ್ದರಿಂದ ಜನರು ಕೋವಿಡ್ ಮಾರ್ಗಸೂಚಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆಯನ್ನು ಮುಂದುವರೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇನ್ನು ಉತ್ತರಪ್ರದೇಶ, ಮಧ್ಯಪ್ರದೇಶ, ಹರ್ಯಾಣ ಮತ್ತು ಕರ್ನಾಟಕ ರಾಜ್ಯಗಳಲ್ಲಿ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com