ದೇಶದಲ್ಲಿ ಕೊರೋನಾ ಹೆಚ್ಚಳ: ಆಸ್ಪತ್ರೆಗಳ ಸನ್ನದ್ಧತೆ ಬಲಪಡಿಸುವಂತೆ ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಸೂಚನೆ

ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆದಿದ್ದು, ಕೋವಿಡ್ -19 ಪರೀಕ್ಷೆಯನ್ನು ಹೆಚ್ಚಿಸಲು, ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸಲು, ವ್ಯಾಕ್ಸಿನೇಷನ್ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಭಾರತದಲ್ಲಿ ಗುರುವಾರ 13,154 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 180 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com