ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. 
ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆ
ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆ

ವಾರಣಾಸಿ: ವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ವಿದ್ಯಾರ್ಥಿಯಾಗಿದ್ದ ದಿನಗಳಿಂದಲೂ ಸಮಾಜವಾದಿ ಸಿದ್ಧಾಂತಗಳ ಅನುಯಾಯಿಯಾಗಿದ್ದ ಶತರುದ್ರ ಪ್ರಕಾಶ್ ಡಿ.31 ರಂದು ರಾಜ್ಯ ಬಿಜೆಪಿ ಘಟಕದ ಮುಖ್ಯಾಸ್ಥರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಬನಾರಸ್ ಹಿಂದೂ ವಿವಿ (ಬಿಹೆಚ್ ಯು) ನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳಲ್ಲೇ ರಾಜಕೀಯ ಕ್ಷೇತ್ರದತ್ತ ಒಲವು ಹೊಂದಿದ್ದರು 1974 ರಲ್ಲಿ ಮೊದಲ ಬಾರಿಗೆ ವಾರಣಾಸಿ ಕಂಟೋನ್ಮೆಂಟ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ವಿಧಾನಸಭೆಗೆ ಪ್ರವೇಶಿಸಿದ್ದರು.

ಮೂರು ವರ್ಷಗಳ ಬಳಿಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಗೆದ್ದಿದ್ದರು ಶತರುದ್ರಪ್ರಕಾಶ್  

1985 ರಲ್ಲಿ ಲೋಕದಳದಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದ ಅವರು 1989 ರಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದರು. ಮುಲಾಯಂ ಸಿಂಗ್ ಯಾದವ್ ಸಚಿವ ಸಂಪುಟದಲ್ಲಿ ಮಂತ್ರಿಯಾಗಿಯೂ ಅವರು ಕಾರ್ಯನಿರ್ವಹಣೆ ಮಾಡಿದ್ದಾರೆ. 

ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವೇಳೆ ಶತರುದ್ರ ಪ್ರಕಾಶ್ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇತ್ತೀಚಿನ ಚಳಿಗಾಲದ ಅಧಿವೇಶನದಲ್ಲಿ ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟನೆಯಾಗಿದ್ದಕ್ಕೆ ವಿಧಾನ ಪರಿಷತ್ ನಲ್ಲಿ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com