ಹಂದ್ವಾರ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಹತ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಂದ್ವಾರ; ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದ ಮೆಹ್ರಾಜುದ್ದೀನ್ ಹಲ್ವಾಯಿ ಅಲಿಯಾಸ್ ಉಬೈದ್ ಎಂಬ ಹಳೆಯ ಉಗ್ರ ಹಾಗೂ ಇದೇ ಉಗ್ರ ಸಂಘಟನೆಗೆ ಸೇರಿದ ಬುರ್ಹಾನ್ ವಾನಿ ಎಂಬ ಉಗ್ರರನ್ನು ಭದ್ರತಾ ಪಡೆಗಳು ಇಂದು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. 

ಹಲ್ವಾಯಿನನ್ನು ಹತ್ಯೆ ಮಾಡಿರುವುದು ದೊಡ್ಡ ಯಶಸ್ಸು ಸಿಕ್ಕಂತಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ. 

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಹಾಗೂ ಹಳೆಯ ಉಗ್ರ ಈತನಾಗಿದ್ದಾನೆ. ಇಂದು ನಡೆದ ಎನ್ಕೌಂಟರ್ ನಲ್ಲಿ ಈತನನ್ನು ಹತ್ಯೆ ಮಾಡಲಾಗಿದೆ. ಸಾಕಷ್ಟು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಈತ ತೊಡಗಿಕೊಂಡಿದ್ದ. ಈತನ ಹತ್ಯೆಯಿಂದ ದೊಡ್ಡ ಯಶಸ್ಸು ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ. 

ಇನ್ನು ಹತ್ಯೆಯಾಗಿರುವ ಮತ್ತೊಬ್ಬ ಉಗ್ರ ಬುರ್ಹಾನ್ ವಾನಿ ಕೂಡ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ದಕ್ಷಿಣ ಕಾಶ್ಮೀರದಲ್ಲಿ ಹಲವು ಅಧಿಕಾರಿಗಳು ಹಾಗೂ ನಾಗರೀಕರ ಹತ್ಯೆಯಲ್ಲಿ ಈತನ ಕೈವಾಡವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com