ಬಿಜೆಪಿಗೆ ಪರ್ಯಾಯ ರಾಷ್ಟ್ರೀಯ ಪಕ್ಷ ಮೇ.2023ಕ್ಕೆ ಮೊದಲು ಅಸ್ಥಿತ್ವಕ್ಕೆ ಬರುವುದಿಲ್ಲ: ಕಾಂಗ್ರೆಸ್ ನಾಯಕ ಮನೀಶ್ ತಿವಾರಿ 

ಭಾರತೀಯ ಜನತಾ ಪಾರ್ಟಿಗೆ ಪರ್ಯಾಯವಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷ 2023ಕ್ಕೆ ಮೊದಲು ಹುಟ್ಟಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಸಂಸದ ಹಾಗೂ ಹಿರಿಯ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಹೇಳಿದ್ದಾರೆ.
ಮನೀಶ್ ತಿವಾರಿ
ಮನೀಶ್ ತಿವಾರಿ

ಹೈದರಾಬಾದ್: ಭಾರತೀಯ ಜನತಾ ಪಾರ್ಟಿಗೆ ಪರ್ಯಾಯವಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷ 2023ಕ್ಕೆ ಮೊದಲು ಹುಟ್ಟಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಸಂಸದ ಹಾಗೂ ಹಿರಿಯ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಹೇಳಿದ್ದಾರೆ.

ಸ್ಥಳೀಯ ಮಟ್ಟದಲ್ಲಿರುವ ಹಲವು ಪಕ್ಷಗಳು ತಮ್ಮ ತಮ್ಮ ರಾಜ್ಯಗಳಲ್ಲಿ ರಾಜಕೀಯ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಮಗ್ನವಾಗಿದ್ದು, ಕೊರೋನಾ ಲಾಕ್ ಡೌನ್ ಕಾರಣದಿಂದ ಆರ್ಥಿಕ ಹಿಂಜರಿಕೆಯಿಂದಾಗಿ 2023ಕ್ಕೆ ಮೊದಲು ಬಿಜೆಪಿಯನ್ನು ಎದುರಿಸಲು ಪರ್ಯಾಯ ರಾಷ್ಟ್ರೀಯ ಪಕ್ಷ ಹುಟ್ಟಿಕೊಳ್ಳುವುದಿಲ್ಲ. ಮುಂದಿನ ವರ್ಷ ಜುಲೈಯಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ವಿರೋಧ ಪಕ್ಷಗಳು ಒಗ್ಗೂಡುವುದನ್ನು ಸಾಬೀತುಪಡಿಸುತ್ತವೆ ಎಂದಿದ್ದಾರೆ.

ಭಾರತದಲ್ಲಿ ಕೇಂದ್ರದ ಆಡಳಿತ ಪಕ್ಷಕ್ಕೆ ಪರ್ಯಾಯವಾಗಿ ಪರಿಣಾಮಕಾರಿ ವಿರೋಧ ಪಕ್ಷದ ಕೊರತೆಯಿದೆಯೇ ಎಂಬ ವಿಷಯದ ಮೇಲೆ ನಡೆದ ವರ್ಚುವಲ್ ಸಮಾವೇಶದಲ್ಲಿ ಮನೀಶ್ ತಿವಾರಿ ಮಾತನಾಡಿದ್ದಾರೆ. ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯನ್ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸದುದ್ದೀನ್ ಒವೈಸಿ ಕೂಡ ಅಧಿವೇಶನದಲ್ಲಿ ಮಾತನಾಡುತ್ತಾ ವಿವಿಧ ವಿರೋಧ ಪಕ್ಷಗಳ ವಿರುದ್ಧ ಕೆಲವು ವಿಮರ್ಶಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ವಿರೋಧ ಪಕ್ಷಗಳು ಕೂಡ ಇತ್ತೀಚೆಗೆ ಹಿಂದುತ್ವ ಅಜೆಂಡಾವನ್ನಿಟ್ಟುಕೊಂಡು ಚುನಾವಣೆಗಳನ್ನು ಎದುರಿಸುತ್ತಿವೆ ಎಂದ ಒವೈಸಿ, ಕಳೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರು ತಮ್ಮ ಬ್ರಾಹ್ಮಣ ಪರಂಪರೆ ಬಗ್ಗೆ ಮಾತನಾಡಿದ್ದನ್ನು, ತಮಿಳು ನಾಡಿನಲ್ಲಿ ಡಿಎಂಕೆ ಹಿಂದು ಧಾರ್ಮಿಕ ಸ್ಥಳಗಳಿಗೆ ಯಾತ್ರೆಗಳಿಗೆ ಹಣ ನೀಡುವುದಾಗಿ ನೀಡಿದ್ದ ಭರವಸೆಗಳ ಬಗ್ಗೆ ಪ್ರಸ್ತಾಪಿಸಿದರು.

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಒವೈಸಿ, ಹರ್ಯಾಣದಲ್ಲಿ ಗೋಹತ್ಯೆ ವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಬೆಂಬಲಿಸಿದೆ. ನಾಗರಿಕ ಪೌರತ್ವ ಕಾಯ್ದೆಯನ್ನು ಶಿವಸೇನೆ ಬೆಂಬಲಿಸಿದೆ. ಜಾತ್ಯತೀತ ಪಕ್ಷಗಳು ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಿಲ್ಲ. ಚುನಾವಣಾ ವ್ಯವಸ್ಥೆಯ ಶೇಕಡಾ 35ರಷ್ಟು ಮತದಾನಗಳನ್ನು ಹೊಂದಿರುವ ಕಡೆಗಳಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಭಾರತದಲ್ಲಿ ಜನರು ಬಿಜೆಪಿ ಮತ್ತು ಬಿಜೆಪಿ ಅಲ್ಲದ ಪಕ್ಷಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಭ್ರಮನಿರಸನಗೊಂಡಿದ್ದಾರೆ. ರಾಜಕೀಯ ನಿರೂಪಕ ಮತ್ತು ವಿಶ್ಲೇಷಕ ಸಂಜಯ ಬರು ಮತ್ತು ಶಿವಸೇನಾ, ಪ್ರಿಯಾಂಕಾ ಚತುರ್ವೇದಿ ಕೂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com