ಕೋವಿಡ್-19: ಇದೇ 16 ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ 16 ರಂದು ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ಸಭೆ ನಡೆಸಲಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದು, ಕೋವಿಡ್-19 ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಈ ರಾಜ್ಯಗಳಲ್ಲಿನ ಹಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಸಂಖ್ಯೆಯು ಹೆಚ್ಚಳ ಕಂಡಿದೆ ಅಥವಾ ಸಾಮಾನ್ಯವಾಗಿ ಇತರ ರಾಜ್ಯಗಳಲ್ಲಿ ಕಂಡುಬರುವಂತೆ ಸೋಂಕಿನ ಸಂಖ್ಯೆ ಈ ರಾಜ್ಯಗಳಲ್ಲಿ ಇಳಿಕೆಯಾಗಿಲ್ಲ.
ಇಂದು ಈಶಾನ್ಯ ರಾಜ್ಯಗಳ ಎಂಟು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ, ಸಾಂಕ್ರಾಮಿಕವನ್ನು ಹೋಗಲಾಡಿಸುವವರೆಗೂ ಲಸಿಕೆ ಅಭಿಯಾನದ ಅಗತ್ಯವಿದೆ ಎಂದರು.
ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ದೊಡ್ಡ ಜನಸಮೂಹವು ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಿಗೆ ಬರುತ್ತಿರುವುದು ಆತಂಕದ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


