6 ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪಿಎಂ ಸಭೆ: ಸಿಎಂ ಯಡಿಯೂರಪ್ಪ ಭಾಗಿ, ಕೋವಿಡ್ ಪರಿಸ್ಥಿತಿಯ ಮಾಹಿತಿ ಪಡೆಯುತ್ತಿರುವ ಮೋದಿ

ಕೋವಿಡ್- 19 ಸೋಂಕು ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಕರ್ನಾಟಕ ಸೇರಿ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.
ವಿಡಿಯೋ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿ
ವಿಡಿಯೋ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿ

ಬೆಂಗಳೂರು: ಕೋವಿಡ್- 19 ಸೋಂಕು ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಕರ್ನಾಟಕ ಸೇರಿ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.

ಪ್ರಧಾನಮಂತ್ರಿಗಳು ನಡೆಸುತ್ತಿರುವ ಈ ವಿಡಿಯೋ ಸಂವಾದದಲ್ಲಿ ಕರ್ನಾಟಕ ಸಿಎಂ ಬಿ.ಎಸ್. ಯಡಯೂರಪ್ಪ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಆಂಧ್ರಪ್ರದೇಶ ಸಿಎಂ ಜಗನ್‌ಮೋಹನ್ ರೆಡ್ಡಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಕೇರಳದ ಸಿಎಂ ಪಿಣರಾಯಿ ವಿಜಯನ್‌ ಅವರು ಪಾಲ್ಗೊಂಡಿದ್ದಾರೆ. 

ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದಾರೆ. ಕೋವಿಡ್ ಉಸ್ತುವಾರಿ ನಿರ್ವಹಿಸುತ್ತಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಡಾ.ಅಶ್ವತ್ಥನಾರಾಯಣ್, ಸಚಿವರಾದ ಅಶೋಕ್, ಸುಧಾಕರ್, ಅರವಿಂದ ಲಿಂಬಾವಳಿ ಉಪಸ್ಥಿತರಿದ್ದಾರೆ.

ವಿಡಿಯೋ ಸಂವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 6 ರಾಜ್ಯಗಳ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಸ್ಥಿತಿ ಹಾಗೂ ಲಸಿಕೆ ಅಭಿಯಾನದ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,949 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 542 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com