ದೇಶ

ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ

ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ಹೊಸ ಸಾರಥಿಯ ನೇಮಕವಾಗಲಿದೆ.

ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ
ನವಜೋತ್ ಸಿಂಗ್ ಸಿಧು
Published On :

ನವದೆಹಲಿ: ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ಹೊಸ ಸಾರಥಿಯ ನೇಮಕವಾಗಲಿದೆ. 

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರ ವಿರೋಧದ ನಡುವೆಯೇ ನವಜೋತ್ ಸಿಂಗ್ ಸಿಧು ಅವರನ್ನು ಕಾಂಗ್ರೆಸ್ ನ ಪಂಜಾಬ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ. 

ನವಜೋತ್ ಸಿಂಗ್ ಸಿಧು ಅವರೊಂದಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಸಂಗತ್ ಸಿಂಗ್ ಗಿಲ್ಝಿಯಾನ್, ಸುಖ್ವಿಂದರ್ ಸಿಂಗ್ ದನ್ನಿ, ಪವನ್ ಗೋಯಲ್ ಹಾಗೂ ಕುಲ್ಜಿತ್ ಸಿಂಗ್ ನಗ್ರಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. 

ನಿರ್ಗಮಿತ ಅಧ್ಯಕ್ಷ ಸುನಿಲ್ ಜಖರ್ ಅವರ ಕೊಡುಗೆಯನ್ನು ಮೆಚ್ಚುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.