ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿಸಲು ಇನ್ನೂ ಹೆಚ್ಚಿನ ಉದಾರವಾದಿ ಸರ್ಕಾರಕ್ಕಾಗಿ ಕಾಯುತ್ತೇವೆ: ಸಜಾದ್ ಗನಿ ಲೋನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮರಳಿ ನೀಡುವುದನ್ನು ನಾವು ನಿರೀಕ್ಷಿಸುವುದಿಲ್ಲ ಎಂದು ಪೀಪಲ್ಸ್ ಕಾನ್ಫರೆನ್ಸ್ ನ ಅಧ್ಯಕ್ಷ ಸಜಾದ್ ಗನಿ ಲೋನ್ ಹೇಳಿದ್ದಾರೆ. 
ಸಜಾದ್ ಗನಿ ಲೋನ್
ಸಜಾದ್ ಗನಿ ಲೋನ್
Updated on

ಶ್ರೀನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮರಳಿ ನೀಡುವುದನ್ನು ನಾವು ನಿರೀಕ್ಷಿಸುವುದಿಲ್ಲ ಎಂದು ಪೀಪಲ್ಸ್ ಕಾನ್ಫರೆನ್ಸ್ ನ ಅಧ್ಯಕ್ಷ ಸಜಾದ್ ಗನಿ ಲೋನ್ ಹೇಳಿದ್ದಾರೆ. 

"ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ವಾಪಸ್ ನೀಡಲಿದೆ ಎಂಬ ವಿಶ್ವಾಸ ನಮಗೆ ಇಲ್ಲ. ಆದರೆ ಅದು ನಮ್ಮನ್ನು ಕೋರ್ಟ್ ಗಳ ಮೊರೆ ಹೋಗುವುದನ್ನು ತಡೆಯುವುದಿಲ್ಲ ಎಂದು ಸಜಾದ್ ಲೋನ್ ಹೇಳಿದ್ದಾರೆ. 

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ವಾಪಸ್ ಪಡೆಯುವುದಕ್ಕಾಗಿ ಇನ್ನೂ ಹೆಚ್ಚಿನ ಉದಾರವಾದಿ ಸರ್ಕಾರಕ್ಕೆ ನಾವು ಕಾಯುತ್ತೇವೆ ಎಂದು ಟ್ವಿಟರ್ ಹ್ಯಾಂಡಲ್ ನಲ್ಲಿ ಸಜಾದ್ ಬರೆದಿದ್ದಾರೆ. 2019 ರ ಆಗಸ್ಟ್ 5 ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ನ್ನು ರದ್ದುಗೊಳಿಸಿತ್ತು.

ಆರ್ಟಿಕಲ್ 370 ರದ್ದುಗೊಳಿಸಿದ್ದು 70 ವರ್ಷಗಳಿಂದ ಈ ಸರ್ಕಾರದ ನೇತೃತ್ವ ವಹಿಸಿದ್ದ ಬಿಜೆಪಿ ರೂಪಿಸಿದ್ದ ಕಾರ್ಯಕ್ರಮವಾಗಿತ್ತು. ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವ ಜಮ್ಮು-ಕಾಶ್ಮೀರಕ್ಕೆ ಆರ್ಟಿಕಲ್ 370 ವಾಪಸ್ ಪಡೆಯುವ ವಿಷಯ ಪೂರ್ಣಪ್ರಮಾಣದ ರಾಜ್ಯ ಸ್ಥಾನಮಾನ ನೀಡುವುದಕ್ಕೆ ಅಡ್ಡಿಯಾಗುವುದಕ್ಕೆ ತಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದು ಸಜಾದ್ ಲೋನ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com