ಆಕ್ಸಿಜನ್ ಕೊರತೆಯಿಂದ ಸಾವು ಕುರಿತು ವಿಪಕ್ಷ ಆಡಳಿತದ ರಾಜ್ಯಗಳು ದತ್ತಾಂಶ ನೀಡಿಲ್ಲ, ಆದರೆ ಈಗ ರಾಜಕೀಯ ಮಾಡುತ್ತಿವೆ: ಬಿಜೆಪಿ

ಕೊರೋನಾ ಎರಡನೇ ಅಲೆ ವೇಳೆ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಪ್ರತಿಪಕ್ಷ-ಆಡಳಿತದ ರಾಜ್ಯಗಳು ನ್ಯಾಯಾಲಯಗಳಲ್ಲಿ ಹೇಳಿಕೊಂಡಿವೆ. ಆದರೆ ಈಗ ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷಗಳಿಗೆ ಬಿಜೆಪಿ ತಿರುಗೇಟು ನೀಡಿದೆ.
ಸಂಬಿತ್ ಪಾತ್ರ
ಸಂಬಿತ್ ಪಾತ್ರ
Updated on

ನವದೆಹಲಿ: ಕೊರೋನಾ ಎರಡನೇ ಅಲೆ ವೇಳೆ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಪ್ರತಿಪಕ್ಷ-ಆಡಳಿತದ ರಾಜ್ಯಗಳು ನ್ಯಾಯಾಲಯಗಳಲ್ಲಿ ಹೇಳಿಕೊಂಡಿವೆ. ಆದರೆ ಈಗ ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷಗಳಿಗೆ ಬಿಜೆಪಿ ತಿರುಗೇಟು ನೀಡಿದೆ. 

ಕೋವಿಡ್ ಎರಡನೇ ಅಲೆ ವೇಳೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ದಿಷ್ಟವಾಗಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿತ್ತು. ಇದಕ್ಕೆ ವಿರೋಧ ಪಕ್ಷದ ನಾಯಕರ ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿತು.

ಏಪ್ರಿಲ್-ಮೇ ತಿಂಗಳಲ್ಲಿ ಎರಡನೇ ಅಲೆ ಉತ್ತುಂಗದಲ್ಲಿದ್ದಾಗ ಜೀವ ಉಳಿಸುವ ಅನಿಲದ ಕೊರತೆಯಿಂದಾಗಿ ಆಸ್ಪತ್ರೆಗಳಲ್ಲಿನ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಕೆಲ ರಾಜ್ಯಗಳಿಂದ ವರದಿಯಾಗಿತ್ತು. ಇನ್ನು ಇದೇ ವೇಳೆ ಆಮ್ಲಜನಕಕ್ಕೆ ಬೇಡಿಕೆ ಸಹ ಹೆಚ್ಚಾಗಿತ್ತು. ಆರೋಗ್ಯವು ರಾಜ್ಯಗಳ ವಿಷಯವಾಗಿರುವುದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನೀಡಿದ ಅಂಕಿಅಂಶಗಳನ್ನು ಆಧರಿಸಿ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಉತ್ತರ ನೀಡಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.

ಆಮ್ಲಜನಕದ ಕೊರತೆಯಿಂದಾಗಿ ರೋಗಿಗಳು ಸಾಯುತ್ತಿರುವ ಬಗ್ಗೆ ಯಾವುದೇ ರಾಜ್ಯವು ಯಾವುದೇ ದತ್ತಾಂಶವನ್ನು ಕಳುಹಿಸಲಿಲ್ಲ ಎಂದು ಅವರು ಪ್ರತಿಪಾದಿಸಿದರು. ಕಾಂಗ್ರೆಸ್ ನ ರಾಹುಲ್ ಗಾಂಧಿ ಮತ್ತು ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಈ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲೇ ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿರುವುದಾಗಿ ಯಾವುದೇ ವರದಿ ನೀಡಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಬಿತ್ ಪಾತ್ರ, ಸಾಂಕ್ರಾಮಿಕ ರೋಗದ ನೀವು ಎರಡು ಸಾಲಿನ ಸುಳ್ಳುಗಳನ್ನು ಆಗಾಗ್ಗೆ ಟ್ವೀಟ್ ಮಾಡುವ ಮೂಲಕ ಟ್ರೋಲ್ ಆಗಿ ಕಾರ್ಯನಿರ್ವಹಿಸಿದ್ದೀರಿ. ಅತಿದೊಡ್ಡ ಪಕ್ಷದ ಮಾಜಿ ಅಧ್ಯಕ್ಷರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬುದು ನೋವಿನ ಸಂಗತಿ ಎಂದರು.

ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂಬ ಉತ್ತರದಿಂದಾಗಿ ಮೋದಿ ಸರ್ಕಾರವನ್ನುಗುರಿಯಾಗಿಸಿಕೊಂಡ ಎಎಪಿ ರಾಜ್ಯಸಭೆಯಲ್ಲಿ ವಾಗ್ದಾಳಿ ನಡೆಸಿತ್ತು. ಇದೇ ವಿಚಾರವಾಗಿ ಹೇಳಿದ ಪಾತ್ರ, ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಏಪ್ರಿಲ್ 23-24ರ ಮಧ್ಯರಾತ್ರಿ ಆಮ್ಲಜನಕದ ಕೊರತೆಯಿಂದಾಗಿ 21 ಜನರು ಸಾವನ್ನಪ್ಪಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಸರ್ಕಾರದ ಸಮಿತಿಯು ಹೈಕೋರ್ಟ್‌ಗೆ ತಿಳಿಸಿರುವುದಾಗಿ ಹೇಳಿದರು. 

ಇದೇ ಅಲ್ಲದೆ ಆಮ್ಲಜನಕದ ಕೊರತೆಯಿಂದ ಯಾರೂ ಸಾವನ್ನಪ್ಪಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಸಹ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಇನ್ನು ಛತ್ತೀಸ್‌ಗಢ ಆರೋಗ್ಯ ಸಚಿವ ಟಿಎಸ್ ಸಿಂಗ್ ದಿಯೋ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ನಲ್ಲಿ 'ಸುಳ್ಳು' ಮತ್ತು ಗೊಂದಲಗಳನ್ನು ಹರಡುವ ಬದಲು ಗಾಂಧಿ ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com