ದೇಶ

ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ, 3 ಯೋಧರಿಗೆ ಗಾಯ

ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ, 3 ಯೋಧರಿಗೆ ಗಾಯ
ಸಂಗ್ರಹ ಚಿತ್ರ
Published On :

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.