ಬಿಹಾರ ವಿಧಾಸಭೆಯಲ್ಲಿ ರಾಜ್ಯದ ಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಮಸೂದೆ ಅಂಗೀಕಾರ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತಮ್ಮ ತವರು ಜಿಲ್ಲೆ ನಳಂದದಲ್ಲಿ ರಾಜ್ಯದ ಮೊಟ್ಟಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಸಜ್ಜಾಗಿದ್ದಾರೆ.
ಬಂದನಾ ಪ್ರೇಯಾಶಿ ಹಾಗೂ ತಂಡ
ಬಂದನಾ ಪ್ರೇಯಾಶಿ ಹಾಗೂ ತಂಡ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತಮ್ಮ ತವರು ಜಿಲ್ಲೆ ನಳಂದದಲ್ಲಿ ರಾಜ್ಯದ ಮೊಟ್ಟಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಸಜ್ಜಾಗಿದ್ದಾರೆ.

ಸುಮಾರು 150 ಎಕರೆಗೂ ಹೆಚ್ಚು ಜಾಗದಲ್ಲಿ ದೇಶದ 8ನೇ ಕ್ರೀಡಾ ವಿಶ್ವವಿದ್ಯಾಲಯವನ್ನು ಬಿಹಾರದಲ್ಲಿ ಸ್ಥಾಪಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮೂಲಕ ಕ್ರೀಡಾ ಆಕಾಂಕ್ಷಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಅನ್ವೇಷಿಸಲು ಬಿಹಾರ ಸರ್ಕಾರ ಮುಂದಾಗಿದೆ.

ಬಿಹಾರ ವಿಧಾನಸಭೆಯಲ್ಲಿ ಮಂಗಳವಾರ ಬಿಹಾರ ಕ್ರೀಡಾ ವಿಶ್ವವಿದ್ಯಾಲಯದ ಮಸೂದೆ 2021 ಅನ್ನು ಅಂಗೀಕರಿಸಲಾಗಿದ್ದು, ಕಲೆ, ಸಂಸ್ಕೃತಿ ಮತ್ತು ಯುವಜನ ಇಲಾಖೆಯ ಕಾರ್ಯದರ್ಶಿ ಬಂದನಾ ಪ್ರೇಯಾಶಿ ಸೇರಿದಂತೆ ಹಲವು ಅಧಿಕಾರಿಗಳ ತಂಡ ಈ ಮಸೂದೆಯನ್ನು ಸಿದ್ಧಪಡಿಸಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಬಂದನಾ ಅವರು,"ಕ್ರೀಡಾ ವಿಶ್ವವಿದ್ಯಾಲಯವನ್ನು ರಾಜ್‌ಗೀರ್‌ನಲ್ಲಿ ಸ್ಥಾಪಿಸಲಾಗುವುದು. ಇದು ಕ್ರೀಡಾ ಅಕಾಡೆಮಿಯನ್ನೂ ಒಳಗೊಂಡಿರುತ್ತದೆ" ಎಂದು ಹೇಳಿದ್ದಾರೆ.

ಇದಲ್ಲದೆ ಬಿಹಾರ ವಿಧಾನಸಭೆಯಲ್ಲಿ ಬಿಹಾರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಸೂದೆಯನ್ನು ಅಂಗೀಕರಿಸಲಾಗಿದ್ದು. 

ಈ ಎರಡೂ ವಿಶ್ವವಿದ್ಯಾಲಯಗಳಲ್ಲಿ, ಒಟ್ಟು ಮೂರನೇ ಒಂದು ಭಾಗದಷ್ಟು ಸೀಟುಗಳನ್ನು ಮಹಿಳೆಯರು ಮತ್ತು ಬಾಲಕಿಯರಿಗೆ ಮೀಸಲಿಡಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com