ಕೋವಿಡ್-19 ಸೋಂಕಿತರ ಸಂಖ್ಯೆ ಗಣನೀಯ ಏರಿಕೆ; ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು

ಭಾರತದಲ್ಲಿ 2ನೇ ಅಲೆ ಬಳಿಕ ಇಳಿಕೆಯಾಗಿದ್ದ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಇದೀಗ ಕ್ರಮೇಣ ಏರಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,654 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ; ಭಾರತದಲ್ಲಿ 2ನೇ ಅಲೆ ಬಳಿಕ ಇಳಿಕೆಯಾಗಿದ್ದ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಇದೀಗ ಕ್ರಮೇಣ ಏರಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,654 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 43,654 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 640 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್-19 ದೇಶದಲ್ಲಿ ಈ  ವರೆಗೂ ಬಲಿಯಾದವರ ಸಂಖ್ಯೆ 4,22,022ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 41,678 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 3,06,63,147ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,99,436 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಅಂತೆಯೇ ದೇಶದಲ್ಲಿ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಈ ವರೆಗೂ 44.61ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ಅಲ್ಲದೆ ದೇಶದಲ್ಲಿ ಈ ವರೆಗೂ ನಡೆಸಿದ ಕೋವಿಡ್ ಪರೀಕ್ಷೆ ಪ್ರಮಾಣ ಕೂಡ 46.09 ಕೋಟಿಗೇರಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com