ರಾಜ್ಯದಲ್ಲಿ 16,673 ಸೇರಿ ದೇಶದಲ್ಲಿ ಸುಮಾರು 2.27 ಲಕ್ಷ ಗರ್ಭೀಣಿಯರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ- ಕೇಂದ್ರ

ಮಹತ್ವದ ಬೆಳವಣಿಗೆಯೊಂದರಲ್ಲಿ ಸದ್ಯ ನಡೆಯುತ್ತಿರುವ ರಾಷ್ಟ್ರೀಯ ಕೋವಿಡ್ ಲಸಿಕಾ ಅಭಿಯಾನದಡಿ ಕರ್ನಾಟಕದಲ್ಲಿ ಸುಮಾರು 16,673 ಗರ್ಭೀಣಿಯರು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸದ್ಯ ನಡೆಯುತ್ತಿರುವ ರಾಷ್ಟ್ರೀಯ ಕೋವಿಡ್ ಲಸಿಕಾ ಅಭಿಯಾನದಡಿ ಕರ್ನಾಟಕದಲ್ಲಿ ಸುಮಾರು 16,673 ಗರ್ಭೀಣಿಯರು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಕೋವಿಡ್-19 ಸೋಂಕಿನ ಅಪಾಯಗಳು ಹಾಗೂ ಲಸಿಕೆಯ ಪ್ರಯೋಜನದ ಬಗ್ಗೆ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಅಧಿಕಾರಿಗಳು ನಿರಂತರವಾಗಿ ಗರ್ಭಿಣಿಯರೊಂದಿಗೆ ತಿಳುವಳಿಕೆ ಮೂಡಿಸಿದ ಕಾರಣ ಇಷ್ಟು ಪ್ರಮಾಣದ ಗರ್ಭಿಣಿಯರು ಲಸಿಕೆ ಪಡೆಯುವಂತಾಗಿದೆ.

ತಮಿಳುನಾಡಿನಲ್ಲಿ ಅತಿ ಹೆಚ್ಚು 78,838 ಗರ್ಭಿಣಿಯರು ಲಸಿಕೆ ಪಡೆದುಕೊಂಡಿದ್ದಾರೆ. ಉಳಿದಂತೆ ಆಂಧ್ರ ಪ್ರದೇಶದಲ್ಲಿ 34,228, ಒಡಿಶಾ 28,821, ಮಧ್ಯಪ್ರದೇಶದಲ್ಲಿ 21,842, ಕೇರಳದಲ್ಲಿ 18,423 ಮತ್ತು ಕರ್ನಾಟಕದಲ್ಲಿ 16,673 ಗರ್ಭಿಣಿಯರು ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ.

ಲಸಿಕೆ ಬಗೆಗಿನ ಭಯ, ಆತಂಕಗಳು, ತಪ್ಪು ಮಾಹಿತಿಗಳು ಮತ್ತು ಕೆಲವು ಸಾಮಾಜಿಕ ನಿಷೇಧಗಳು ಮತ್ತು ಸಮಸ್ಯೆಗಳನ್ನು ನಿವಾರಿಸಿ, ಗರ್ಭಿಣಿ ಮಹಿಳೆಯರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಹಾಯ ಮಾಡಲು ಮಾರ್ಗದರ್ಶನ ಟಿಪ್ಪಣಿಯನ್ನು 2 ನೇ ಜುಲೈ 2021 ರಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡಿತ್ತು.

ವಿಶೇಷವಾಗಿ ಗರ್ಭೀಣಿಯರಿಗೆ ಲಸಿಕೆ, ಪ್ರಸವಪೂರ್ವ ಚಿಕಿತ್ಸಾಲಯಗಳಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಸಲಹೆಗಾರರಿಂದ ಅರ್ಹ ಫಲಾನುಭವಿಗಳಿಗೆ ಸಲಹೆ ನೀಡುವುದು, ಲಸಿಕೆಗಾಗಿ ಆಶಾ ಕಾರ್ಯಕರ್ತರನ್ನು ಸಜ್ಜುಗೊಳಿಸುವುದು ಮತ್ತು ಗರ್ಭಿಣಿಯರಿಗೆ ಮತ್ತು ಹಾಲುಣಿಸುವ ಮಹಿಳೆಯರಿಗೆ ಉಪ ಆಯುಕ್ತರು ಪ್ರಮಾಣಪತ್ರ ನೀಡುವಂತಹ ಹೊಸ ವಿಧಾನಗಳು ಗರ್ಭಿಣಿಯರಿಗೆ ಆತ್ಮವಿಶ್ವಾಸ ಮೂಡಿಸಲು ಮತ್ತು ಲಸಿಕೆ ಸ್ವೀಕಾರಕ್ಕೆ ಪ್ರೇರೆಪಿಸಿವೆ.

ಗರ್ಭಾವಸ್ಥೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ತಗುಲಿದರೆ ಆರೋಗ್ಯದ ಕ್ಷೀಣತೆಗೆ ಕಾರಣವಾಗಬಹುದು, ತೀವ್ರ ಕಾಯಿಲೆಯು ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ಇದು ಭ್ರೂಣದ ಮೇಲೂ ಪರಿಣಾಮ ಬೀರಬಹುದು ಎಂದು ಅಧ್ಯಯನಗಳು ತೋರಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com