ಕೋವಿಡ್-19 ಲಸಿಕೆ
ಕೋವಿಡ್-19 ಲಸಿಕೆ

ಶೇ.10 ರಷ್ಟು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಪರಿಗಣಿಸಿ: ಕೇಂದ್ರ

ಭಾರತದ 46 ಜಿಲ್ಲೆಗಳಲ್ಲಿ ಕೋವಿಡ್-19 ಪರೀಕ್ಷೆ ಪಾಸಿಟಿವಿಟಿ ದರ ಶೇ.10 ರಷ್ಟಿದ್ದು, ಈ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ನವದೆಹಲಿ: ಭಾರತದ 46 ಜಿಲ್ಲೆಗಳಲ್ಲಿ ಕೋವಿಡ್-19 ಪರೀಕ್ಷೆ ಪಾಸಿಟಿವಿಟಿ ದರ ಶೇ.10 ರಷ್ಟಿದ್ದು, ಈ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ಕೋವಿಡ್-19 ಸೋಂಕು ಹೆಚ್ಚಳ ಅಥವಾ ಪಾಸಿಟಿವಿಟಿ ದರ, ಎರಡೂ ಏರಿಕೆಯಾಗುತ್ತಿರುವ 10 ರಾಜ್ಯಗಳ ಕೇಂದ್ರಿತ ಪರಿಶೀಲನೆ ಸಭೆಯ ಬಳಿಕ ಈ ನಿರ್ದೇಶನವನ್ನು ಕೇಂದ್ರ ಸರ್ಕಾರ ನೀಡಿದೆ.

ಕೇರಳ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಒಡಿಶಾ, ಮಿಜೊರಾಮ್, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶ ಹಾಗೂ ಮಣಿಪುರಗಳಲ್ಲಿ ಶೇ.80 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರೋಗಿಗಳು ಸಮುದಾಯಕ್ಕೆ ಕೋವಿಡ್-19 ಸೋಂಕನ್ನು ಹರಡದೇ ಇರುವಂತೆ ಎಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ 40,000 ಕೋವಿಡ್-19 ಪ್ರಕರಣಗಳು ದಿನನಿತ್ಯ ವರದಿಯಾಗುತ್ತಿದ್ದರೂ ಅಜಾಗರೂಕತೆ ವಿರುದ್ಧ ಎಚ್ಚರಿಕೆ ನೀಡಿದ್ದು ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸುವುದಕ್ಕೆ ಒತ್ತಾಯಿಸಿದ್ದಾರೆ.

53 ಜಿಲ್ಲೆಗಳಲ್ಲಿ ಶೇ.5-10 ರಷ್ಟು ಪಾಸಿಟಿವಿಟಿ ವರದಿಯಾಗುತ್ತಿದ್ದು, ಸಾಂಕ್ರಾಮಿಕ ಸಂಪೂರ್ಣವಾಗಿ ನಿಯಂತ್ರಣದಲ್ಲಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಮಟ್ಟದ ಸೆರೋಸರ್ವೆಗಳನ್ನು ನಡೆಸುವುದಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com