ದೇಶ

ಹೆಚ್ಚಿದ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 41,649 ಹೊಸ ಕೇಸ್ ಪತ್ತೆ, 593 ಮಂದಿ ಸಾವು

ಕೊರೋನಾ 3ನೇ ಅಲೆ ಆತಂಕದಲ್ಲಿರುವ ಭಾರತದಲ್ಲಿ ದಿನ ಕಳೆಯುತ್ತಿದ್ದಂತೆ ಕೋವಿಡ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,649 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 593 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಹೆಚ್ಚಿದ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 41,649 ಹೊಸ ಕೇಸ್ ಪತ್ತೆ, 593 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಕೊರೋನಾ 3ನೇ ಅಲೆ ಆತಂಕದಲ್ಲಿರುವ ಭಾರತದಲ್ಲಿ ದಿನ ಕಳೆಯುತ್ತಿದ್ದಂತೆ ಕೋವಿಡ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,649 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 593 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,16,13,993ಕ್ಕೆ ತಲುಪಿದ್ದು, ಸಾವಿನ 4,23,810ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 37,291 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,07,81,263ಕ್ಕೆ ತಲುಪಿದೆ. 

ಕಳೆದ ನಾಲ್ಕು ದಿನಗಳಿಂದ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,08,920ಕ್ಕೆ ಏರಿಕೆಯಾಗಿದೆ. 

ಇನ್ನು ಭಾರತದಲ್ಲಿ ಒಂದೇ 17,76,315 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 46,64,27,038 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  46,15,18,479 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.