ಉತ್ತರ, ದಕ್ಷಿಣ ಭಾರತದಲ್ಲಿ ಸಾಮಾನ್ಯ ಮುಂಗಾರು; ಮಧ್ಯ ಭಾರತದಲ್ಲಿ ಹೆಚ್ಚು ಮಳೆ: ಐಎಂಡಿ

ನೈಋತ್ಯ ಮಾನ್ಸೂನ್ ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಸಾಮಾನ್ಯ ಮಳೆಯನ್ನು ತರಬಹುದು ಮಧ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮತ್ತು ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು MeT ಇಲಾಖೆ ಮಂಗಳವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ನೈಋತ್ಯ ಮಾನ್ಸೂನ್ ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಸಾಮಾನ್ಯ ಮಳೆಯನ್ನು ತರಬಹುದು ಮಧ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮತ್ತು ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು MeT ಇಲಾಖೆ ಮಂಗಳವಾರ ತಿಳಿಸಿದೆ.

ನೈಋತ್ಯ ಮಾನ್ಸೂನ್ 2021ರಲ್ಲಿ ಎರಡನೇ ದೀರ್ಘಾವಧಿಯ ಮುನ್ಸೂಚನೆಯನ್ನು ಬಿಡುಗಡೆ ಮಾಡಿದ ಭಾರತದ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತುಂಜಯ್ ಮೊಹಾಪಾತ್ರ ಅವರು, ಈ ವರ್ಷ ಮಾನ್ಸೂನ್ ಒಟ್ಟಾರೆಯಾಗಿ ದೇಶದಲ್ಲಿ ಸಾಮಾನ್ಯವಾಗುವ ಸಾಧ್ಯತೆಯಿದೆ ಎಂದರು.

ಇದು ದೀರ್ಘಾವಧಿಯ ಸರಾಸರಿ (ಎಲ್‌ಪಿಎ) ಯ ಶೇಕಡಾ 96-104ರ ನಡುವೆ ಇರಲಿದೆ.ಎಂದು ಮೋಹಪಾತ್ರ ಹೇಳಿದರು.

ನೈಋತ್ಯ ಮಾನ್ಸೂನ್ ಕಾಲಾವಧಿಯಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಒಟ್ಟಾರೆ ದೇಶದಲ್ಲಿ ಸಾಮಾನ್ಯ ಮಳೆಯಾಗಬಹುದು. ದೇಶಾದ್ಯಂತ ಮಾನ್ಸೂನ್ ಶೇಕಡಾ 101 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

1961-2010ರ ಅವಧಿಯಲ್ಲಿ ದೇಶಾದ್ಯಂತ ಮಳೆಯ ಸರಾಸರಿ 88 ಸೆಂ.ಮೀ. ಇತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com