ಈವರೆಗೆ ಸುಮಾರು 24.65 ಕೋಟಿ ಡೋಸ್ ಕೋವಿಡ್ ಲಸಿಕೆ ರಾಜ್ಯಗಳಿಗೆ ಪೂರೈಕೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಸುಮಾರು 24 ಕೋಟಿ ಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಸುಮಾರು 24 ಕೋಟಿ ಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಉಚಿತ ದರ ಹಾಗೂ ರಾಜ್ಯಗಳಿಂದ ನೇರ ಖರೀದಿ ಹಂತದಲ್ಲಿ ಈವರೆಗೂ 24 ಕೋಟಿಗೂ ಹೆಚ್ಚು (24,65,44,060) ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ. 23,47,43,489 ಡೋಸ್ ವ್ಯರ್ಥ ಡೋಸ್ ಕೂಡಾ ಇದರಲ್ಲಿ ಸೇರಿದೆ ಎಂದು ಇಂದು ಬೆಳಗ್ಗೆ ಮಾಹಿತಿ ನೀಡಲಾಗಿದೆ. 

ಲಸಿಕೆ ನೀಡಿಕೆಗಾಗಿ 1,19,46,925 ಡೋಸ್ ಕೋವಿಡ್ ಲಸಿಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಸಚಿವಾಲಯ ಹೇಳಿದೆ. ಮೂರನೇ ಹಂತದ ಕೋವಿಡ್-19 ಲಸಿಕೆ ಅಭಿಯಾನ ಮೇ 1ರಿಂದ ಆರಂಭವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com