ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 94,052 ಪ್ರಕರಣಗಳು ಪತ್ತೆ; 6148 ಮಂದಿ ಸಾವು!

ದೇಶದಲ್ಲಿ ಗುರುವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 94,052 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಬರೋಬ್ಬರಿ 6148 ಮಂದಿ ಸಾವನ್ನಪ್ಪಿದ್ದಾರೆ. 

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿರುವುದು ಒಂದೆಡೆ ನೆಮ್ಮದಿಯನ್ನು ನೀಡುತ್ತಿದ್ದು, ಮತ್ತೊಂದೆಡೆ ಸಾವಿನ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕವನ್ನು ಹೆಚ್ಚು ಮಾಡಿದೆ. 

ದೇಶದಲ್ಲಿ ಗುರುವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 94,052 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಬರೋಬ್ಬರಿ 6148 ಮಂದಿ ಸಾವನ್ನಪ್ಪಿದ್ದಾರೆ. 

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,91,83,121ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,59,676ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 11,67,952ಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,51,367 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,76,55,493ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,04,690 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 37,21,98,253 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,90,58,360 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com