ಸಚಿನ್ ಪೈಲಟ್
ಸಚಿನ್ ಪೈಲಟ್

ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು, ನನ್ನ ಜೊತೆ ಅಲ್ಲ: ಬಿಜೆಪಿ ಸೇರ್ಪಡೆ ಬಗ್ಗೆ ಸಚಿನ್ ಪೈಲಟ್

ಜಿತಿನ್ ಪ್ರಸಾದ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕೂಡಾ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹರಡಿದೆ. 

ಜೈಪುರ್: ಜಿತಿನ್ ಪ್ರಸಾದ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕೂಡಾ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹರಡಿದೆ. 

ಈ ನಡುವೆ 25 ವರ್ಷ ಕಾಂಗ್ರೆಸ್ ಪಕ್ಷದಲ್ಲಿದ್ದು ಆಮೇಲೆ ಬಿಜೆಪಿ ಸೇರಿದ್ದ ರೀತಾ ಬಹುಗುಣ ಜೋಷಿ ನಾನು ಸಚಿನ್ ಪೈಲಟ್ ಜತೆ ಮಾತನಾಡಿದ್ದೇನೆ. ಅವರು ಶೀಘ್ರದಲ್ಲಿಯೇ ಬಿಜೆಪಿ ಸೇರಲಿದ್ದಾರೆ. ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷದಲ್ಲಿ ಹಿತವಾಗಿಲ್ಲ ಎಂದಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿನ್ ಪೈಲಟ್, ರೀತಾ ಬಹುಗುಣ ಜೋಷಿ ಅವರು ಸಚಿನ್ ಜತೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಅವರು ಬಹುಶಃ ಸಚಿನ್ ತೆಂಡೂಲ್ಕರ್ ಜತೆ ಮಾತನಾಡಿರಬೇಕು. ಆಕೆಗೆ ನನ್ನ ಜತೆ ಮಾತನಾಡಲು ಧೈರ್ಯವಿಲ್ಲ ಎಂದು ವದಂತಿ ತಳ್ಳಿಹಾಕಿದ್ದಾರೆ.

ಕಾಂಗ್ರೆಸ್ ಶಾಸಕರ ಗುಂಪೊಂದು ಸಚಿನ್ ಪೈಲಟ್ ಅವರನ್ನು ಭೇಟಿಯಾದ ಒಂದು ದಿನದ ನಂತರ ರಾಜಸ್ಥಾನ ಆಡಳಿತ ಪಕ್ಷದಲ್ಲಿ ಮತ್ತೆ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಈ ಮಧ್ಯೆ ಜಿತಿನ್ ಪ್ರಸಾದ ರೀತಿಯೇ ತಾನೂ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ ಎಂಬ ವದಂತಿಗಳನ್ನು ಸಚಿನ್ ಪೈಲಟ್ ತಳ್ಳಿ ಹಾಕಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com