ಕೋವಿಡ್ ನಿರ್ಬಂಧ ಉಲ್ಲಂಘನೆ ಆರೋಪ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ವಿರುದ್ಧ ಎಫ್ಐಆರ್ ದಾಖಲು!

ಕೋವಿಡ್-19 ಸಾಂಕ್ರಾಮಿ ನಿಯಮಗಳನ್ನು ಉಲ್ಲಂಘಿಸಿ ತೈಲ ಬೆಲೆ ಏರಿಕೆ ವಿರುದ್ಧ ಹೊರವಲಯ ಗುರಂಗಾವ್ ನಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಅಲಿಯಾಸ್ 'ಭಾಯ್' ಜಗ್ತಾಪ್ ಹಾಗೂ 50 ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಮುಂಬೈ ಕಾಂಗ್ರೆಸ್ ಅಧ್ಯಕ್ಷ ಜಗ್ತಾಪ್
ಮುಂಬೈ ಕಾಂಗ್ರೆಸ್ ಅಧ್ಯಕ್ಷ ಜಗ್ತಾಪ್

ಮುಂಬೈ:  ಕೋವಿಡ್-19 ಸಾಂಕ್ರಾಮಿ ನಿಯಮಗಳನ್ನು ಉಲ್ಲಂಘಿಸಿ ತೈಲ ಬೆಲೆ ಏರಿಕೆ ವಿರುದ್ಧ ಹೊರವಲಯ ಗುರಂಗಾವ್ ನಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಅಲಿಯಾಸ್ 'ಭಾಯ್' ಜಗ್ತಾಪ್ ಹಾಗೂ 50 ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಗುರಂಗಾವ್ ನ ಎಸ್ ವಿ ರೋಡ್ ನಲ್ಲಿ ಸೇರಿದ್ದ ಜಗ್ತಾಪ್ ಹಾಗೂ ಮತ್ತಿತರ ಕಾರ್ಯಕರ್ತರು, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರು. ಕೆಲವರು ಪ್ರತಿಭಟನೆ ವೇಳೆ ಮಾಸ್ಕ್ ಧರಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡೀಸಿಲೆ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿರುವುದರ ಕುರಿತು ಕೇಂದ್ರ ಸರ್ಕಾರದ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.ಐಪಿಸಿ ಸೆಕ್ಷನ್ 188 ( ಸಾವರ್ಜನಿಕ ಸೇವಕರ ಆದೇಶ ಅಗೌರವಿಸುವುದು) 

269 ( ಸೋಂಕು ಹರಡುವಿಕೆಯ ಸಾಧ್ಯತೆಯಲ್ಲಿ ನಿರ್ಲಕ್ಷತನ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆ ಅಡಿಯಲ್ಲಿ ಮುಂಬೈ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com