ರಾಜಸ್ತಾನ: ಗೋವು ಕಳ್ಳಸಾಗಣೆ ಆರೋಪ; ಗುಂಪಿನಿಂದ ವ್ಯಕ್ತಿಗೆ ಥಳಿತ, ಕಗ್ಗೊಲೆ

ಗೋವು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಏಳೆಂಟು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜೈಪುರ: ಗೋವು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಏಳೆಂಟು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಜಸ್ತಾನದ ಚಿತ್ತೋರ್ ಗಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಮೃತನನ್ನು 25 ವರ್ಷದ ಬಾಬು ಭಿಲ್ ಎಂದು ಗುರುತಿಸಲಾಗಿದೆ. ಇನ್ನು ಗುಂಪಿನ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿರುವ ಪಿಂಟು ಭಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜೂನ್ 13ರ ಮಧ್ಯರಾತ್ರಿ ಬಾಬು ಮತ್ತು ಪಿಂಟು ಮಧ್ಯಪ್ರದೇಶಕ್ಕೆ ಗೋವುಗಳನ್ನು ಸಾಗುತ್ತಿದ್ದಾಗ ಗುಂಪು ಭಿಲ್ಖಂಡ ಬಳಿ ಹಿಡಿದು ಥಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಸಂಬಂಧ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರವಿ ಮೆಹರ್ಡಾ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com