ಭಾರತಕ್ಕೆ ನೀಡಿದ ಭರವಸೆಯಂತೆ ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿ ನೇಮಕ ಮಾಡಿದ ಟ್ವೀಟರ್!

ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು ಅಧಿಕಾರಿಯ ವಿವರಗಳನ್ನು ಶೀಘ್ರದಲ್ಲೇ ಐಟಿ ಸಚಿವಾಲಯದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಟ್ವೀಟರ್ ತಿಳಿಸಿದೆ.
ಟ್ವೀಟರ್
ಟ್ವೀಟರ್
Updated on

ನವದೆಹಲಿ: ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು ಅಧಿಕಾರಿಯ ವಿವರಗಳನ್ನು ಶೀಘ್ರದಲ್ಲೇ ಐಟಿ ಸಚಿವಾಲಯದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಟ್ವೀಟರ್ ತಿಳಿಸಿದೆ.

ಹೊಸ ಐಟಿ ನಿಯಮಗಳನ್ನು 'ತಕ್ಷಣ' ಅನುಸರಿಸುವಂತೆ ಕೇಂದ್ರ ಸರ್ಕಾರವು ಕೊನೆಯ ಅವಕಾಶವನ್ನು ನೀಡುವ ಮೂಲಕ ಟ್ವಿಟರ್‌ಗೆ ನೋಟಿಸ್ ನೀಡಿತ್ತು. ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದರೆ ಟ್ವೀಟರ್ ಐಟಿ ಕಾಯ್ದೆಯಡಿ ಹೊಣೆಗಾರಿಕೆಯಿಂದ ವಿನಾಯಿತಿ ಕಳೆದುಕೊಳ್ಳುತ್ತದೆ ಎಂದು ಎಚ್ಚರಿಸಿತ್ತು.

ಇದರ ಬೆನ್ನಲ್ಲೇ, ಹೊಸ ಐಟಿ ನಿಯಮಗಳ ಪ್ರಕಾರ ಮುಖ್ಯ ಅನುಸರಣೆ ಅಧಿಕಾರಿಯ ನೇಮಕವನ್ನು ಅಂತಿಮಗೊಳಿಸುವ ಹಂತದಲ್ಲಿದೆ. ಅಲ್ಲದೆ ಒಂದು ವಾರದೊಳಗೆ ಹೆಚ್ಚುವರಿ ವಿವರಗಳನ್ನು ಸಲ್ಲಿಸುವುದಾಗಿ ಟ್ವಿಟರ್ ಕಳೆದ ವಾರ ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಕಂಪನಿಯು ಎಲ್ಲ ಪ್ರಯತ್ನಗಳನ್ನು ಮುಂದುವರೆಸಿದೆ. ಪ್ರಕ್ರಿಯೆಯ ಪ್ರತಿಯೊಂದು ಹಂತದ ಪ್ರಗತಿಯನ್ನು ಐಟಿ ಸಚಿವಾಲಯಕ್ಕೆ ತಿಳಿಸುತ್ತಿದೆ ಎಂದು ಟ್ವಿಟರ್ ವಕ್ತಾರರು ತಿಳಿಸಿದ್ದಾರೆ.

ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಆ ವಿವರಗಳನ್ನು ಶೀಘ್ರದಲ್ಲೇ ಸಚಿವಾಲಯದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

ನಿಯಮಗಳ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಯಾವುದೇ ಸಾಮಾಜಿಕ ಜಾಲತಾಣವಾಗಲಿ ಕುಂದುಕೊರತೆ ಅಧಿಕಾರಿ, ನೋಡಲ್ ಅಧಿಕಾರಿ ಮತ್ತು ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಿಸುವ ಅಗತ್ಯವಿದೆ. ಈ ಸಿಬ್ಬಂದಿ ಭಾರತದ ನಿವಾಸಿಯಾಗಿರಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com