ಗುಪ್ಕಾರ್ ಮೈತ್ರಿಕೂಟ ನಂತರ, ಈಗ ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವುದಾಗಿ ಕಾಂಗ್ರೆಸ್ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಘಟಕದ ವಕ್ತಾರ ರವೀಂದರ್ ಶರ್ಮಾ ತಿಳಿಸಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಘಟಕದ ವಕ್ತಾರ ರವೀಂದರ್ ಶರ್ಮಾ ತಿಳಿಸಿದ್ದಾರೆ. 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಹಿರಿಯ ನಾಯಕರಾದ ಕರಣ್ ಸಿಂಗ್, ಪಿ ಚಿದಂಬರಂ, ಗುಲಾಮ್ ನಬಿ ಆಜಾದ್, ರಜನಿ ಪಾಟೀಲ್, ಜಿಎ ಮಿರ್ ಮತ್ತು ತಾರಿಕ್ ಹಮೀದ್ ಕರ್ರಾ ಭಾಗವಹಿಸಿದ್ದರು ಎಂದು ವಕ್ತಾರರು ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಜಮ್ಮು ಮತ್ತು ಕಾಶ್ಮೀರದ ಹದಿನಾಲ್ಕು ನಾಯಕರನ್ನು ಆಹ್ವಾನಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿಎ ಮಿರ್ ಮತ್ತು ಪಕ್ಷದ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ. 

2019ರ ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370ನೇ ಕಲಂ ಅನ್ನು ತೆಗೆದು ಹಾಕಿತ್ತು. ನಂತರ ಕೇಂದ್ರಾಡಳಿತ ಪ್ರದೇಶವಾಗಿ ವಿಭಜನೆಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com